HomeKarnatakaBIG NEWS: ಪ್ರೀತಿ ನಿರಾಕರಿಸಿದ್ದಕ್ಕೆ ಚಾಕು ಇರಿದು ಯುವಕನ ಮೇಲೆ ಯುವತಿಯಿಂದ ಹಲ್ಲೆ

BIG NEWS: ಪ್ರೀತಿ ನಿರಾಕರಿಸಿದ್ದಕ್ಕೆ ಚಾಕು ಇರಿದು ಯುವಕನ ಮೇಲೆ ಯುವತಿಯಿಂದ ಹಲ್ಲೆ

ಹಾಸನ: ಪ್ರೀತಿ ನಿರಾಕರಿಸಿದಕ್ಕೆ ಯುವತಿಯೊಬ್ಬಳು ಯುವಕನ ಮೇಲೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಹಾಸನದಲ್ಲಿ ನಡೆದಿದೆ.

ಮನು ಕುಮಾರ್ ಹಲ್ಲೆಗೊಳಗಾಗಿರುವ ಯುವಕ. ಡಿ.31ರ ಮಧ್ಯರಾತ್ರಿ ಮನು ಕುಮಾರ್ ಮೇಲೆ ಯುವತಿ ಹಲ್ಲೆ ನಡೆಸಿದ್ದು, ಘಟನೆ ತದವಾಗಿ ಬೆಳಕಿಗೆ ಬಂದಿದೆ. ಗಂಭೀರವಾಗಿ ಗಾಯಗೊಂದಿರುವ ಯುವಕ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾನೆ.

ಹೊಸ ವರ್ಷಾಚರಣೆ ಮುಗಿಸಿ ವಾಪಾಸ್ ಆಗುತ್ತಿದ್ದಾಗ ಮನು ಗೆಳತಿ ಆತನ ಮೇಲೆ ಹಲ್ಲೆ ನಡೆಸಿ, ಹತ್ಯೆಗೆ ಯತ್ನಿಸಿದ್ದಾಳೆ. ಹಾಸನ ಬಡಾವಣೆ ಠಾಣೆಯಲ್ಲಿ ಕೊಲೆ ಯತ್ನ ಕೇಸ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular