HomeKarnatakaಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು; ಇಬ್ಬರು ಸ್ಥಳದಲ್ಲೇ ದುರ್ಮರಣ

ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು; ಇಬ್ಬರು ಸ್ಥಳದಲ್ಲೇ ದುರ್ಮರಣ

ಹಾಸನ: ಭೀಕರ ಕಾರು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ವೇಗವಾಗಿ ಬಂದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ 18 ವರ್ಶದ ಧೀರಜ್ ಹಾಗೂ 49 ವರ್ಷದ ಜಗದೀಶ್ ಮೃತಪಟ್ಟಿದ್ದಾರೆ. ಮೃತರು ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ನಿವಾಸಿಗಳು ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತ ಜಗದೀಶ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದು, ಚನ್ನರಾಯಪಟ್ಟಣದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಕುಟುಂಬ ಸಮೇತ ತೆರಳಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular