HomeKarnatakaಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ: ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆಗೆ ಯತ್ನ

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ: ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆಗೆ ಯತ್ನ

ಹಾಸನ: ಮನೆಗೆ ತೆರಳಲು ದಾರಿ ಬಿಡುವ ವಿಚಾರವಾಗಿ ಆರಂಭವಾದ ಜಗಳ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ಮಹಿಳೆಯನ್ನು ಬೆತ್ತಲುಗೊಳಿಸಿ ಹಲ್ಲೆಗೆ ಯತ್ನಿಸಿದ ಘಟನೆ ಹಾಸನ ಜಿಲ್ಲೆಯ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಂಚಿಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ಗೋವಿಂದಪ್ಪ, ಕುಮಾರ್ ಹಾಗೂ ಇತರರು ಮನೆಗೆ ಹೋಗಲು ದಾರಿ ನಿರ್ಮಿಸುವ ವಿಚಾರವಾಗಿ ಗಲಾಟೆಯಾಗಿದೆ. ಈ ವೇಳೆ ಗೋವಿಂದಪ್ಪನ ಸಂಬಂಧಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆಗೆ ಮುಂದಾಗಿದ್ದು ಘಟನೆ ಸಂಬ್ಂಧ ಹಳೆಬೀಡು ಠಾಣೆಯಲ್ಲಿ ದೂರು ದಾಖಲಾಗಿದೆ.

ಮಹಿಳೆ ಸಂಬಂಧಿ ದೂರು ಆಧರಿಸಿ ಗಂಗಾಬೋವಿ, ಶಿವಕುಮಾರ್, ಸೋನು, ಕಿರಣ್, ಆನಂದ್, ಪುನೀತ್, ಪ್ರತಾಪ್, ಪ್ರಸನ್ನ, ನಾಗಾಬೋವಿ, ಮಂಜಾಬೋವಿ, ವಿರುದ್ಧ ಪ್ರಕರಣ ದಾಖಲಾಗಿದೆ. ಮಹಿಳೆ ಮೇಲೆ ಗುಂಪಾಗಿ ಹಲ್ಲೆ ನಡೆಸೌ ಮುಂದಾಗಿದ್ದರು ಎಂಬ ಆರೋಪ ಕೇಳಿಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣ ದಾಖಲಾದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ ಎಂದು ಮಹಿಳೆ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಳೆಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular