ಹಾಸನ: ಖಾಲಿಯಾದ ಸಿಲಿಂಡರ್ ಬದಲಿಸಿ ತುಂಬಿದ ಸಿಲಿಂಡರ್ ಅಳವಡಿಸುತ್ತಿದ್ದ ವೇಳೆ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆ.ಗಬ್ಬೂರು ಗ್ರಾಮದ ಮನೆಯಲ್ಲಿ ನಡೆದಿದೆ.
ಸಿಲಿಂಡರ್ ಖಾಲಿಯಾಗಿತ್ತು. ಹಾಗಾಗಿ ಹೊಸ ಸಿಲಿಂಡರ್ ಹಾಕುತ್ತಿದ್ದಾಗ ಏಕಾಏಕಿ ಸ್ಫೋಟಗೊಂಡಿದ್ದು, ತಾಯಿ ಹಾಗೂ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳು ಚಲ್ಲಾಪಿಲ್ಲಿಯಾಗಿವೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

