HomeKarnatakaBIG NEWS: ಗಾಯಗೊಂಡಿದ್ದ ಆನೆಗೆ ಚಿಕಿತ್ಸೆ ನೀಡುತ್ತಿದ್ದಾಗ ಅವಘಡ; ಅರವಳಿಕೆ ಮದ್ದು ನೀಡಲು ಹೋದ ಸಿಬ್ಬಂದಿ...

BIG NEWS: ಗಾಯಗೊಂಡಿದ್ದ ಆನೆಗೆ ಚಿಕಿತ್ಸೆ ನೀಡುತ್ತಿದ್ದಾಗ ಅವಘಡ; ಅರವಳಿಕೆ ಮದ್ದು ನೀಡಲು ಹೋದ ಸಿಬ್ಬಂದಿ ಮೇಲೆಯೇ ಆನೆ ದಾಳಿ

ಹಾಸನ: ಗಾಯಗೊಂಡಿದ್ದ ಕಾಡಾನೆಯ ಚಿಕಿತ್ಸೆ ನೀಡುತ್ತಿದ್ದ ವೇಳೆ ಆನೆ ಏಕಾಏಕಿ ಅರಣ್ಯ ಇಲಾಖೆ ಸಿಬ್ಬಂದಿಯ ಮೇಲೆ ದಾಳಿ ನಡೆಸಿದ್ದು, ಸಿಬ್ಬಂದಿ ಸ್ಥಿತಿ ಗಂಭೀರವಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ನಡೆದಿದೆ.

ಕಾಡಾನೆ ಭೀಮ ಗಂಭೀರವಾಗಿ ಗಾಯಗೊಂಡಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಆನೆಗೆ ಚಿಕಿತ್ಸೆ ನೀಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಆನೆ ಸಿಬ್ಬಂದಿ ಮೇಲೆ ದಾಳಿ ಮಾಡಿದೆ. ಅರಣ್ಯ ಸಿಬ್ಬಂದಿ ವೆಂಕಟೇಶ್, ಆನೆಗೆ ಅರವಳಿಕೆ ಮದ್ದು ನೀಡುತ್ತಿದ್ದರು. ಈ ವೇಳೆ ಏಕಾಏಕಿ ಆನೆ ವೆಂಕಟೇಶ್ ಮೇಲೆ ದಾಳಿ ಮಾಡಿದ್ದು, ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳು ಸಿಬ್ಬಂದಿಯ ಕೂಗಾಟ ಕೇಳಿ ಉಳಿದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ವೆಂಕಟೇಶ್ ಗಂಭೀರವಾಗಿ ಗಾಯಗೊಂಡಿದ್ದು, ಹಾಸನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈವರೆಗೂ ಯಾರ ಮೇಲೆಯೂ ದಾಳಿ ನಡೆಸದ ಕಾಡಾನೆ ಭೀಮ, ಇದೀಗ ಚಿಕಿತ್ಸೆ ನೀಡುತ್ತಿದ್ದ ಅರಣ್ಯ ಸಿಬ್ಬಂದಿ ಮೇಲೆಯೇ ದಾಳಿ ನಡೆಸಿರುವುದು ಆತಂಕಕ್ಕೆ ಕಾರಣವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular