HomeKarnatakaBREAKING NEWS: ಕಾಡಾನೆ ದಾಳಿ; ಗಾಯಗೊಂಡಿದ್ದ ಅರಣ್ಯ ಸಿಬ್ಬಂದಿ ಚಿಕಿತ್ಸೆ ಫಲಿಸದೇ ಸಾವು

BREAKING NEWS: ಕಾಡಾನೆ ದಾಳಿ; ಗಾಯಗೊಂಡಿದ್ದ ಅರಣ್ಯ ಸಿಬ್ಬಂದಿ ಚಿಕಿತ್ಸೆ ಫಲಿಸದೇ ಸಾವು

ಹಾಸನ: ಗಾಯಗೊಂಡಿದ್ದ ಕಾಡಾನೆಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ ಆನೆ ದಾಳಿಗೊಳಗಾಗಿ ಗಾಯಗೊಂಡಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ವೆಂಕಟೇಶ್ ಮೃತ ಸಿಬ್ಬಂದಿ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಡಾನೆ ಭೀಮ ಗಂಭೀರವಾಗಿ ಗಾಯಗೊಂಡಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಆನೆಗೆ ಚಿಕಿತ್ಸೆ ನೀಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಆನೆ ಸಿಬ್ಬಂದಿ ಮೇಲೆ ದಾಳಿ ಮಾಡಿದೆ. ಅರಣ್ಯ ಸಿಬ್ಬಂದಿ ವೆಂಕಟೇಶ್, ಆನೆಗೆ ಅರವಳಿಕೆ ಮದ್ದು ನೀಡುತ್ತಿದ್ದರು. ಈ ವೇಳೆ ಏಕಾಏಕಿ ಆನೆ ವೆಂಕಟೇಶ್ ಮೇಲೆ ದಾಳಿ ಮಾಡಿದ್ದು, ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳು ಸಿಬ್ಬಂದಿಯ ಕೂಗಾಟ ಕೇಳಿ ಉಳಿದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ವೆಂಕಟೇಶ್ ಗಂಭೀರವಾಗಿ ಗಾಯಗೊಂಡಿದ್ದು, ಹಾಸನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವೆಂಕಟೇಶ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular