HomeLive NewsBREAKING NEWS: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ವ್ಯಕ್ತಿ ಬಲಿ: BMTC ಬಸ್ ಕಂಡಕ್ಟರ್ ಸಾವು!

BREAKING NEWS: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ವ್ಯಕ್ತಿ ಬಲಿ: BMTC ಬಸ್ ಕಂಡಕ್ಟರ್ ಸಾವು!

ಹಾಸನ: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ. 41 ವರ್ಷದ ಬಸ್ ಕಂಡಕ್ಟರ್ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಗಿರೀಶ್ (41) ಮೃತ ದುರ್ದೈವಿ. ಬಿಎಂಟಿಸಿ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಗಿರೀಶ್, ಇಂದು ರಜೆ ಇದ್ದ ಕಾರಣಕ್ಕೆ ಊರಿಗೆ ಬಂದಿದ್ದರು. ಹಾಸನ ತಾಲೂಕಿನ ಕಟ್ಟಾಯ ಹೋಬಳಿ ಹ್ಯಾರಾನೆ ಗ್ರಾಮದಲ್ಲಿ ಗಿರೀಶ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೊಲದಲ್ಲಿ ಜೋಳ ಬೆಳೆಗೆ ಗೊಬ್ಬರ ಹಾಕಿ ಮನೆಗೆ ವಾಪಸ್ ಆಗಿದ್ದ ಗಿರೀಶ್, ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಇಂದು ಒಂದೇ ದಿನ ಹಾಸನದಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿದ್ದಾರೆ. ಬೆಳಿಗ್ಗೆಯಷ್ಟೇ ಆಟೋ ಚಾಲಕ ಗೋವಿಂದ (37) ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಕಳೆದ ಒಂದು ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular