HomeKarnatakaBREAKING: ಭೀಕರ ಅಪಘಾತ; ತಾಯಿ-ಮಗ ಸ್ಥಳದಲ್ಲೇ ದುರ್ಮರಣ

BREAKING: ಭೀಕರ ಅಪಘಾತ; ತಾಯಿ-ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಬಿ.ಕಾಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ತಾಯಿ ಕಮಲಮ್ಮ (70) ಹಾಗೂ ಮಗ ಸತೀಶ್ (40) ಮೃತ ದುರ್ದೈವಿಗಳು. ಅಪಘಾತದಲ್ಲಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬೆನ್ನಲ್ಲೇ ಆಕ್ರೋಶಗೊಂಡ ಸ್ಥಳೀಯರು ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಸಾರ್ವಜನಿಕರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular