HomeLatest NewsBREAKING : ಹಾಸನಾಂಬೆ ಉತ್ಸವದ ವೇಳೆ ದರ್ಶನದ 'ಪಾಸ್' ವ್ಯವಸ್ಥೆ ರದ್ದು, 'ಗೋಲ್ಡ್ ಕಾರ್ಡ್' ವಿತರಿಸಲು...

BREAKING : ಹಾಸನಾಂಬೆ ಉತ್ಸವದ ವೇಳೆ ದರ್ಶನದ ‘ಪಾಸ್’ ವ್ಯವಸ್ಥೆ ರದ್ದು, ‘ಗೋಲ್ಡ್ ಕಾರ್ಡ್’ ವಿತರಿಸಲು ನಿರ್ಧಾರ.!

ಹಾಸನ : ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗೆ ನೀಡುತ್ತಿದ್ದ ಪಾಸ್ ವ್ಯವಸ್ಥೆ ರದ್ದುಗೊಳಿಸಿ ‘ಗೋಲ್ಡ್ ಕಾರ್ಡ್’ ವಿತರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

ಹಾಸನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಹಾಸನಾಂಬೆ ಜಾತ್ರಾಮಹೋತ್ಸವದ ಪೂರ್ವ ಸಿದ್ದತೆ ಸಭೆಯಲ್ಲಿ ಎಸಿ ಮಾರುತಿ ಹೇಳಿಕೆ ನೀಡಿದ್ದಾರೆ.

ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗೆ ನೀಡುತ್ತಿದ್ದ ಪಾಸ್ ವ್ಯವಸ್ಥೆ ರದ್ದುಗೊಳಿಸಿ ‘ಗೋಲ್ಡ್ ಕಾರ್ಡ್’ ವಿತರಿಸಲು ನಿರ್ಧರಿಸಿದ್ದೇವೆ. ಗೋಲ್ಡ್ ಕಾರ್ಡ್ ಮೂಲಕ ಒಬ್ಬರು ಮಾತ್ರ ಹಾಸನಾಂಬೆ ದರ್ಶನ ಪಡೆಯಬಹುದಾಗಿದೆ.ಒಂದು ಕಾರ್ಡ್ ಮೂಲಕ ಒಬ್ಬರಿಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶ್ರೀ ಹಾಸನಾಂಬ ದೇವಿಯ ದರ್ಶನಕ್ಕೆ ಆಗಮಿಸುವ ಜನ ಸಂದಣಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ಭಕ್ತಾದಿಗಳಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲು ಅಗತ್ಯ ಸಿದ್ಧತೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದೇವಿ ದರ್ಶನಕ್ಕೆ ಆಗಮಿಸುವ ಭಕ್ತರ ಜನಸಂದಣಿಯನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಲು ಪ್ರತಿನಿತ್ಯ ಬಸ್, ರೈಲುಗಳ ಮೂಲಕ ಹಾಗೂ ಟೋಲ್ ಗಳನ್ನು ಹೊರತುಪಡಿಸಿ ಇತರೆ ಮಾರ್ಗಗಳಲ್ಲಿ ನಗರಕ್ಕೆ ಪ್ರವೇಶಿಸುವ ವಾಹನಗಳ ಮಾಹಿತಿಯನ್ನು ಅಧಿಕಾರಿಗಳು ನೀಡುವಂತೆ ತಿಳಿಸಿದರು.ವಾಹನಗಳ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆ ಜೊತೆಗೆ ಪಾದರಕ್ಷೆಗಳನ್ನು ಬಿಡಲು ಸ್ಟಾö್ಯಂಡ್, ಟಿಕೆಟ್ ಕೌಂಟರ್, ಸಾಂಸ್ಕೃತಿಕ ಕಾರ್ಯಕ್ರಮ, ವಸ್ತುಗಳ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಬೇಕು ಎಂದ ಅವರು ಜನರ ಸುರಕ್ಷತೆಯ ದೃಷ್ಠಿಯಿಂದ ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ಬ್ಯಾರಿಕೇಡ್ಗಳು ಸುಸ್ಥಿತಿಯಲ್ಲಿರುವುದನ್ನು ಪರಿಶೀಲಿಸಬೇಕು ಎಂದರು.ದೇವಿ ದರ್ಶನಕ್ಕೆ ಆಗಮಿಸುವ ಭಕ್ತಾಧಿಗಳು ಸ್ಥಳೀಯವಾಗಿ ಪ್ರವಾಸ ಮಾಡಲು ಟೂರ್ ಪ್ಯಾಕೇಜ್ ಮಾಡುವಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular