ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸುತ್ತಿದ್ದು, ವಾರಾಂತ್ಯ ಹಾಗೂ ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಹಾಸನಾಂಬೆ ದರ್ಶನಕ್ಕೆ ಬರುತ್ತಿರುವ ಭಕ್ತರ ಸಂಖ್ಯೆ ಹೆಚ್ಚಳವಾಗಿದೆ. ದೇವಾಲಯಕ್ಕೆ ಭಕ್ತಸಾಗರವೇ ಹರಿದು ಬರುತ್ತಿರುವುದರಿಂದ ಹಾಸನ ಜಿಲ್ಲಾಡಳಿತ ಶಿಷ್ಟಾಚಾರ ಪಾಲನೆಯಲ್ಲಿ ಮಾರ್ಪಾಡು ಮಾಡಿದೆ.
ಈ ನಡುವೆ ಬೆಂಗಳೂರು ಹಾಗೂ ಹಾಸನ ನಡುವೆ ಬಸ್ ಸಂಚಾರವನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಜನರನ್ನು ನಿಯಂತ್ರಿಸಲು ಟಿಕೆಟ್ ಬುಕಿಂಗ್ ಕೂಡ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಹಾಸನಾಂಬೆ ದೇವಸ್ಥಾನ ಹಾಗೂ ಸುತ್ತಮುತ್ತ ಭಾರಿ ಸಂಖ್ಯೆಯಲ್ಲಿ ಜನರು ಬರುತ್ತಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಕಿಲೋ ಮೀಟರ್ ಗಟ್ಟಲೇ ಜನರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ. ಈ ನಡುವೆ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈಗಾಗಲೇ ಹಾಸನಾಂಬೆ ದರ್ಶನ ಪಡೆಯಲೆಂದು 50 ಸಾವಿರ ಜನರು ಮುಂಗಡ ಟಿಕೆಟ್ ಕಾಯ್ದಿರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಟಿಕೆಟ್ ಬುಕಿಂಗ್ ಕೂಡ ಸಧ್ಯಕ್ಕೆ ಬಂದ್ ಆಗಿದೆ.