ಹಾಸನ: ರಾಜ್ಯದ ಪ್ರಸಿದ್ಧ ದೇವಾಲಯ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇಗುಲದ ಬಾಗಿಲು ತೆರೆದಿದೆ. ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಾರೆ. ಈ ಬಾರಿ ಹಾಸನಾಂಬೆ ದರ್ಶನ ವ್ಯವಸ್ಥೆಯಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ.
ಹಾಸನ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಇಂದು ಹಾಸನಾಂಬೆ ದೇಗುಲದ ಗರ್ಭಗುಡಿಯ ಬಾಗಿಲು ತೆರೆಯಲಾಗುತ್ತಿದೆ. ಮೊದಲ ದಿನ ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶವಿರುವುದಿಲ್ಲ. ಈ ಬಾರಿ ಇಂದಿನಿಂದ ಅಕ್ಟೋಬರ್ 23ರವರೆಗೆ 15 ದಿನಗಳ ಕಾಲ ಹಾಸನಾಂಬೆ ದೇಗುಲದ ಬಾಗಿಲು ತೆರೆದಿರುತ್ತದೆ.
15 ದಿನಗಳಲ್ಲಿ ಮೊದಲ ಮತ್ತು ಕೊನೆಯ ದಿನಗಳನ್ನು ಹೊರತುಪಡಿಸಿ ಉಳಿದ 13 ದಿನಗಳ ಕಾಲ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಈ ಬಾರಿ ವಿಐಪಿ ಪಾಸ್ ರದ್ದುಪಡಿಸಲಾಗಿದೆ. ಲಕ್ಷಾಂತ ಭಕ್ತರಿಗಾಗಿ ಪ್ರತ್ಯೇಕ ಸರತಿ ಸಾಲುಗಳನ್ನು ನಿರ್ಮಿಸಲಾಗಿದೆ.
ವಿಶೇಷವಾಗಿ ನೇರ ದರ್ಶನ ಪಡೆಯಲು ಇಚ್ಚಿಸುವ ಭಕ್ತರಿಗೆ 1000 ರೂಪಾಯಿ ಹಾಗೂ 300 ರೂಪಾಯಿ ಟಿಕೆಟ್ ವ್ಯವಸ್ಥೆ ಮಾಡ್ಲಾಗಿದೆ. ಈ ಟಿಕೆಟ್ ಗಳನ್ನು ದೇವಸ್ಥಾನದ ಬಳಿಕ ಕೌಂಟರ್ ಹಾಗೂ ಆನ್ ಲೈನ್ ಮೂಲಕ ಪಡೆಯಬಹುದು. 1000 ರೂಪಾಯಿ ಟಿಕೆಟ್ ಪಡೆದ ಭಕ್ತರಿಗೆ ಪ್ರತ್ಯೇಕ ಸರತಿ ಸಾಲು ನಿರ್ಮಿಸಲಾಗಿದೆ.
ಇನ್ನು ಸಾಮನ್ಯ ಭಕ್ತರಿಗೆ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆಯಲು ಸ್ಯಗಮ ವ್ಯವಸ್ಥೆ ಮಾಡಲಾಗಿದೆ. ಸುಮಾರು 11-12 ಕಿ.ಮೀ ವರೆಗೂ ಬ್ಯಾರಿಕೇಡ್ ನಿರ್ಮಿಸಲಾಗಿದೆ. ಭಕ್ತರಿಗೆ ನೀರಿನ ವ್ಯವಸ್ಥೆ, ಮಜ್ಜಿಗೆ ವ್ಯವಸ್ಥೆ ಮಾಡಲಾಗಿದ್ದು, ಸಿಸಿಕ್ಯಾಮರಾ ಕಣ್ಗಾವಲು, ದೇವರ ದರ್ಶನ ನೇರವಾಗಿ ನೋಡಲು ಟಿವಿ ಪರದೆ ಅಳವಡಿಸಲಾಗಿದೆ.