ಹಾಸನ: ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನ ಅಧಿದೇವತೆ, ಐತಿಹಾಸಿಕ ಹಾಸನಾಂಬೆ ದರ್ಶನ ಸಂಪನ್ನಗೊಂಡಿದೆ. ಇಂದು ಸಂಜೆ 5 ಗಂಟೆಗೆ ಸಾರ್ವಜನಿಕರಿಗೆ ಹಾಸನಾಂಬೆ ದರ್ಶನ ಬಂದ್ ಆಗಿದ್ದು, ಕೊನೇ ಕ್ಷಣದಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಓಡೋಡಿ ಬಂದು ದೇವರ ದರ್ಶನ ಪಡೆದರು.
ಈ ಬಾರಿ 13 ದಿನಗಳ ಕಾಲ ಹಾಸನಾಂಬೆ ದೇವಿ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಈವರೆಗೆ ಒಟ್ಟು 26 ಲಕ್ಷ ಜನರು ಹಾಸನಾಂಬೆ ದರ್ಶನ ಪಡೆದು ಪುನೀತರಾಗಿದ್ದಾರೆ. ಈ ಬಾರಿ ಹಾಸನಾಂಬೆ ದರ್ಶನಕ್ಕೆ ಜಿಲ್ಲಾಡಳಿತ ವಿಶೇಷ ವ್ಯವಸ್ಥೆಗಳನ್ನು ಮಾಡಿತ್ತು. ಪ್ರತಿದಿನ ಲಕ್ಷಾಂತರ ಭಕ್ತರು ಸರತಿ ಸಾಲಿನಲ್ಲಿ ಬಂದು ದೇವಿ ದರ್ಶನ ಪಡೆದಿದ್ದಾರೆ.
ಈ ಬಾರಿ ದರ್ಶನ ಟಿಕೆಟ್ ಮೂಲಕವೇ ಹಾಸನಾಂಬೆ ದೇವಸ್ಥಾನಕ್ಕೆ 22 ಕೋಟಿ ರೂಪಾಯಿ ಆದಾಯ ಬಂದಿದೆ. ಹಸನಾಂಬೆ ಉತ್ಸವ ಯಶಸ್ವಿಯಾಗಿ ನೆರವೇರಿದ್ದು, ನಾಳೆ ಮಧ್ಯಾಹ್ನ 12 ಗಂಟೆಗೆ ಪೂಜಾ ಕೈಂಕರ್ಯಗಳೊಂದಿಗೆ ಹಾಸನಾಂಬೆ ದೇವಸ್ಥಾನದ ಬಾಗಿಲು ಬಂದ್ ಮಾಡಲಾಗುತ್ತದೆ. ಬಳಿಕ ಮುಂದಿನ ವರ್ಷ ಅಕ್ಟೋಬರ್ ತಿಂಗಳಿನವರೆಗೆ ದೇವಾಲಯದ ಬಾಗಿಲು ಮುಚ್ಚಲಿದೆ.