HomeKarnatakaಭಕ್ತರಿಗೆ ಗುಡ್ ನ್ಯೂಸ್: ನ. 2 ರಿಂದ 24 ಗಂಟೆಯೂ ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬ...

ಭಕ್ತರಿಗೆ ಗುಡ್ ನ್ಯೂಸ್: ನ. 2 ರಿಂದ 24 ಗಂಟೆಯೂ ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬ ದೇವಿ ದರ್ಶನಕ್ಕೆ ಅವಕಾಶ

ಹಾಸನ: ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬ ದೇವಿ ದರ್ಶನ ನವೆಂಬರ್ 2ರಿಂದ ಆರಂಭವಾಗಲಿದೆ. ಮಧ್ಯಾಹ್ನ 12 ಗಂಟೆಗೆ ಸಂಪ್ರದಾಯದಂತೆ ದೇವಾಲಯದ ಗರ್ಭಗುಡಿ ಬಾಗಿಲು ತೆಗೆಯಲಾಗುವುದು ಎಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮ ತಿಳಿಸಿದ್ದಾರೆ.

ಹಾಸನಾಂಬ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಈ ಬಾರಿ ಯಾರೇ ಗಣ್ಯರು ಬಂದರೂ, ಅರ್ಚನೆ ಇರುವುದಿಲ್ಲ. ದೇವಿ ದರ್ಶನವನ್ನು ಎರಡು ನಿಮಿಷದೊಳಗೆ ಮುಗಿಸಬೇಕು ಎಂದು ಹೇಳಿದ್ದಾರೆ. ನ. 2ರಂದು ದೇವಾಲಯದ ಬಾಗಿಲು ತೆರೆಯಲಿದ್ದು, ನವೆಂಬರ್ 15 ರಂದು ಮುಚ್ಚಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಸನಾಂಬ ದೇವಾಲಯದ ಬಾಗಿಲು ತೆರೆಯುವ ಮತ್ತು ಮುಚ್ಚುವ ದಿನ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಉಳಿದಂತೆ ದಿನದ 24 ಗಂಟೆಯೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಶಕ್ತಿ ಯೋಜನೆಯ ಕಾರಣ ಈ ಬಾರಿ ಹಾಸನಾಂಬ ದೇವಿ ದರ್ಶನಕ್ಕೆ 10 ಲಕ್ಷಕ್ಕೂ ಅಧಿಕ ಮಂದಿ ಬರುವ ನಿರೀಕ್ಷೆ ಇದೆ. ಕಳೆದ ವರ್ಷ 6 ಲಕ್ಷ ಜನ ಆಗಮಿಸಿದ್ದರು ಎಂದು ಹೇಳಿದ್ದಾರೆ.

ದೇವಿಯ ಪೂಜೆಯನ್ನು ನೇರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಿಸಬಹುದು. ವಿಶೇಷ ದರ್ಶನಕ್ಕೆ 300 ರೂ., 1 ಸಾವಿರ ರೂ.ಗಳ ಪಾಸ್ ವ್ಯವಸ್ಥೆ ಮಾಡಲಾಗಿದೆ ಎಂದು ಉಪವಿಭಾಗಾಧಿಕಾರಿ ಮಾರುತಿ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular