BREAKING: ಹಾಸನಾಂಬೆ ದೇವಾಲಯದ ಬಳಿ ಗಣ್ಯರ ವಾಹನ ಪ್ರವೇಶಕ್ಕೆ ಬ್ರೇಕ್: ಸಚಿವರು, ಶಾಸಕರ ವಾಹನಕ್ಕೂ ನಿರ್ಬಂಧ

ಹಾಸನ: ಹಾಸನದ ಪ್ರಸಿದ್ಧ ದೇವಾಲಯ ಹಾಸನಾಂಬೆ ದೇವಾಲಯದ ಬಾಗಿಲು ನಿನ್ನೆಯಿಂದ ತೆರೆದಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಹಾಸನಾಂದೆ ದೇವಿ ದರ್ಶನಕ್ಕಾಗಿ ಆಗಮಿಸುತ್ತಿದ್ದಾರೆ. ಈ ಬಾರಿ ದೇವಾಲಯದ ಆಡಳಿತ ಮಂಡಳಿ ಕಟ್ಟುನಿಟ್ಟಿನ ಕ್ರಮಗಳನ್ನು ಹಾಗೂ ಭಕ್ತರಿಗಾಗಿ ವಿಶೇಷ ವ್ಯಸ್ಥೆಗಳನ್ನು ಮಾಡಿದೆ.

ಈಬಾರಿ ಹಾಸನಾಂಬೆ ದರ್ಶನಕ್ಕೆ ವಿಐಪಿ ಪಾಸ್ ರದ್ದುಗೊಳಿಸಲಾಗಿದೆ. ಅಲ್ಲದೇ ದೇವಾಲಯದ ಬಳಿ ಗಣ್ಯರ ಹಾಗೂ ಸಚಿವರ, ಶಾಸಕರ ವಾಹನಗಳ ಪ್ರವೇಶಕ್ಕೂ ಬ್ರೇಕ್ ಹಾಕಲಾಗಿದೆ. ದೇವ್ಬಸ್ಥಾನದ ಬಳಿ ಯಾವುದೇ ವಾಹನಗಳ ನಿಲುಗಡೆಗೆ ನಿರ್ಬಂಧ ವಿಧಿಸಲಾಗಿದ್ದು, ಎಲ್ಲೆಡೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭಕ್ತರಿಗೆ, ಸಾರ್ವಜನಿಕರಿಗೆ ಯಾವುದೇ ತೊಂದರೆಗಳು ಆಗದಂತೆ ಕಟ್ಟೆಚ್ಚರ ವಹಿಸಲಾಗಿದೆ.

ಸಚಿವರು, ಶಾಸಕರು, ಗಣ್ಯಾತಿಗಣ್ಯರ ವಾಹನಗಳನ್ನು ಪ್ರವಾಸಿ ಮಂದಿರದ ಬಳಿಯೇ ನಿಲುಗಡೆ ಮಾಡುವ ವ್ಯವಸ್ಥೆ ಮಾಡಲಾಗಿದೆ. ದೇವರ ದರ್ಶನಕ್ಕೆ ಬರುವ ಭಕ್ತರಿಗಾಗಿ ಪ್ರತ್ಯೇಕ ಸರತಿ ಸಾಲುಗಳನ್ನು ನಿರ್ಮಿಸಲಾಗಿದ್ದು, ಯಾವುದೇ ರೀತಿ ಅನಾನೂಕೂಲವಾಗದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ.

ಅಂಕ್ಟೋಬರ್ 9ರಂದು ಹಾಸನಾಂಬೆ ದೇವಾಲಯದ ಬಾಗಿಲು ತೆರೆದಿದ್ದು, ಅಕ್ಟೋಬರ್ 23ರವರೆಗೂ ದೇವಾಲಯದ ಬಾಗಿಲು ತೆರೆದಿರಲಿದೆ. ಮೊದಲದಿನವಾದ ನಿನ್ನೆ ಭಕ್ತರಿಗೆ ಹಾಗೂ ಸಾರ್ವಜನಿಕರಿಗೆ ದೇವಾಲಯದ ಪ್ರವೇಶಕ್ಕೆ ಅವಕಾಶವಿರಲಿಲ್ಲ. ಇಂದಿನಿಂದ ಭಕ್ತರಿಗೆ ಹಾಗೂ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಆಗಮಿಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read