HomeLatest Newsವರ್ಷಕ್ಕೊಮ್ಮೆ ದರ್ಶನ ನೀಡುವ 'ಹಾಸನಾಂಬೆ' ಸಾರ್ವಜನಿಕ ದರ್ಶನಕ್ಕೆ ಇಂದು ತೆರೆ: 20 ಕೋಟಿ ರೂ. ಆದಾಯ

ವರ್ಷಕ್ಕೊಮ್ಮೆ ದರ್ಶನ ನೀಡುವ ‘ಹಾಸನಾಂಬೆ’ ಸಾರ್ವಜನಿಕ ದರ್ಶನಕ್ಕೆ ಇಂದು ತೆರೆ: 20 ಕೋಟಿ ರೂ. ಆದಾಯ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿಯ ಸಾರ್ವಜನಿಕರ ದರ್ಶನಕ್ಕೆ ಅಕ್ಟೋಬರ್ 22 ಕೊನೆಯ ದಿನವಾಗಿದೆ. ಅಕ್ಟೋಬರ್ 23 ರಂದು ಮಧ್ಯಾಹ್ನ ದೇವಾಲಯದ ಗರ್ಭಗುಡಿ ಬಾಗಿಲು ಮುಚ್ಚಲಾಗುವುದು.

ಕಳೆದ 13 ದಿನದಲ್ಲಿ ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆದುಕೊಂಡಿದ್ದು, ಹುಂಡಿ ಕಾಣಿಕೆ ಹೊರತುಪಡಿಸಿ ಸುಮಾರು 20 ಕೋಟಿ ರೂಪಾಯಿಯಷ್ಟು ಆದಾಯ ಸಂಗ್ರಹವಾಗಿದೆ.

1000 ರೂ., 300 ರೂ. ವಿಶೇಷ ದರ್ಶನ ಟಿಕೆಟ್ ಮಾರಾಟ ಮತ್ತು ಲಾಡು ಪ್ರಸಾದದಿಂದ ಸುಮಾರು 20 ಕೋಟಿಯಷ್ಟು ಆದಾಯ ಬಂದಿದೆ. ಅಕ್ಟೋಬರ್ 9 ರಿಂದ 23ರ ವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಅಕ್ಟೋಬರ್ 22 ಸಾರ್ವಜನಿಕರ ದರ್ಶನಕ್ಕೆ ಕೊನೆಯ ದಿನವಾಗಿದೆ. ಅಕ್ಟೋಬರ್ 23ರ ಮಧ್ಯಾಹ್ನ ದೇವಾಲಯದ ಗರ್ಭಗುಡಿ ಬಾಗಿಲು ಮುಚ್ಚಲಾಗುವುದು. ಭಕ್ತರಿಗೆ ಅವಕಾಶ ಇರುವುದಿಲ್ಲ. ಬುಧವಾರವೇ ದರ್ಶನ ಮುಕ್ತಾಯವಾಗುವುದರಿಂದ ಲಕ್ಷಾಂತರ ಜನ ಆಗಮಿಸುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular