HomeLatest Newsಕಾಲೇಜು ಹಾಸ್ಟೆಲ್‌ ಸಾಂಬಾರ್ ನಲ್ಲಿ ಹಲ್ಲಿ ಪತ್ತೆ: 15 ವಿದ್ಯಾರ್ಥಿನಿಯರು ಅಸ್ವಸ್ಥ

ಕಾಲೇಜು ಹಾಸ್ಟೆಲ್‌ ಸಾಂಬಾರ್ ನಲ್ಲಿ ಹಲ್ಲಿ ಪತ್ತೆ: 15 ವಿದ್ಯಾರ್ಥಿನಿಯರು ಅಸ್ವಸ್ಥ

ಹಾಸನ: ಕೃಷಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಸಾಂಬಾರ್ ನಲ್ಲಿ ಹಲ್ಲಿ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಸಾರಾಪುರದಲ್ಲಿ ನಡೆದಿದೆ.

ವಿದ್ಯಾರ್ಥಿನಿಯರು ರಾತ್ರಿಯ ಊಟ ಮಾಡುವ ವೇಳೆ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆಯಾಗಿದ್ದು, ಅದೇ ವಿಷಪೂರಿತ ಆಹಾರವನ್ನು ಸೇವಿಸಿದ ಸುಮಾರು 15 ವಿದ್ಯಾರ್ಥಿನಿಯರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ.

ಊಟ ಮಾಡುವಾಗ ಸಾಂಬಾರ್‌ನಲ್ಲಿ ಹಲ್ಲಿ ಇರುವುದು ತಡವಾಗಿ ಬೆಳಕಿಗೆ ಬಂದಿದೆ. ಅಷ್ಟರಲ್ಲಾಗಲೇ ಊಟ ಸವಿದಿದ್ದ 15 ವಿದ್ಯಾರ್ಥಿನಿಯರಲ್ಲಿ ವಾಂತಿ ಹಾಗೂ ತಲೆಸುತ್ತು ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. ಇವರ ಪೈಕಿ ತೀವ್ರವಾಗಿ ಅಸ್ವಸ್ಥಗೊಂಡ ಆರು ವಿದ್ಯಾರ್ಥಿನಿಯರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಹಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳು ಹಿಮ್ಸ್ ಆಸ್ಪತ್ರೆಗೆ ಖುದ್ದಾಗಿ ಭೇಟಿ ನೀಡಿ, ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ್ದಾರೆ.

ಸುಮಾರು 400 ವಿದ್ಯಾರ್ಥಿನಿಯರಿರುವ ಈ ಹಾಸ್ಟೆಲ್‌ಗೆ ಕಳೆದ ಎರಡು ತಿಂಗಳಿಂದ ಗ್ಯಾಸ್ ಸಿಲಿಂಡರ್ ಸಿಗದೆ ಸಮಸ್ಯೆಯಾಗಿದ್ದು, ಅಡುಗೆ ಮನೆಯ ಹೊರಗೆ ಸೌದೆ ಒಲೆಯಲ್ಲಿ ಅಡುಗೆ ಮಾಡಲಾಗುತ್ತಿದೆ. ಅಡುಗೆ ತಯಾರಿಸುವವರು ಶುಚಿತ್ವ ಕಾಪಾಡದ ಕಾರಣ ಸಾಂಬಾರ್‌ಗೆ ಹಲ್ಲಿ ಬಿದ್ದಿದೆ. ಇದೇ ಅಚಾತುರ್ಯಕ್ಕೆ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular