ಹಾಸನ: ಕಾಫಿ ತೋಟದ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಕೆಸರು ನೀರಲ್ಲಿ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದಲ್ಲಿ ನಡೆದಿದೆ.
ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಭರತ್ ಹಾಗೂ ಮಿಥುನ್ ಮೃತ ವಿದ್ಯಾಅರ್ಥಿಗಳು ಇಬ್ಬರೂ ಪಾಳ್ಯ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳು.
ಇಬ್ಬರೂ ಸ್ನೇಹಿತರೊಂದಿಗೆ ಪ್ರಕಾಶ್ ಎಂಬುವವರ ಕಾಫಿ ತೋಟದ ಕೆರೆಯಲ್ಲಿ ಈಜಲು ಹೋಗಿದ್ದರು. ಭರತ್ ಹಾಗೂ ಮಿಥುನ್ ಕೆರೆಯಲ್ಲಿ ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ವಿದ್ಯಾರ್ಥಿಗಳು ಕೆರೆಯಿಂದ ಮೇಲೆ ಬಂದು ಬಚಾವ್ ಆಗಿದ್ದಾರೆ.
ಸ್ಥಳೀಯರು ವಿದ್ಯಾರ್ಥಿಗಳ ಮೃತದೇಹವನ್ನು ಮೇಲಕೆತ್ತಿದ್ದಾರೆ. ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಕ್ಕಳಿಬ್ಬರನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

