HomeKarnataka40 ವರ್ಷವಾದರೂ ಮದುವೆ ಮಾಡಿಸಿಲ್ಲವೆಂದು ತಾಯಿ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನ: ಆರೋಪಿ ಅರೆಸ್ಟ್

40 ವರ್ಷವಾದರೂ ಮದುವೆ ಮಾಡಿಸಿಲ್ಲವೆಂದು ತಾಯಿ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನ: ಆರೋಪಿ ಅರೆಸ್ಟ್

ಹಾಸನ : 40 ವರ್ಷವಾದರೂ ತನಗೆ ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿ ಮೇಲೆ ಕಲ್ಲು ಎತ್ತಿಹಾಕಿ ಮಗನೇ ಕೊಲೆಗೆ ಯತ್ನ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ.

ಉಮಾಶಂಕರ್ (40) ತಾಯಿಯನ್ನು ಕೊಲ್ಲಲುನ್ ಯತ್ನಿಸಿದ ಮಗ. ಗಂಗಮ್ಮ ಸಾವು ಬದುಕಿನ ನಡುವೆ ಹೋರಾಡುತ್ತಿರುವ ತಾಯಿ. ಆರೋಪಿ ಉಮಾಶಂಕರ್ ಗಂಗಮ್ಮನ ಎರಡನೇ ಮಗ. ಮೊದಲ ಮಗ ಅಂತರ್ಜಾತಿ ವಿವಾಹವಾದ ಹಿನ್ನೆಲೆ ಕುಟುಂಬದಿಂದ ಪ್ರತ್ಯೇಕವಾಗಿದ್ದರು. ಮಗಳನ್ನು ಬೆಂಗಳೂರು ಮೂಲದ ವರನಿಗೆ ಕೊಟ್ಟು ಮದುವೆ ಮಾಡಿದ್ದರು. ಆದರೆ, ಎರಡನೇ ಮಗನಿಗೆ ಮದುವೆ ಮಾಡುವ ಪ್ರಯತ್ನದಲ್ಲಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಂಗಮ್ಮ ೦ಮಗನಿಗೆ ಮದುವೆ ಮಾಡಲು ಹಲವೆಡೆ ವಧುವನ್ನು ನೋಡಲು ಮುಂದಾಗಿದ್ದರು. ಆದರೆ, ಕಳೆದ ವರ್ಷ ನಡೆದ ಕುಂಭಮೇಳಕ್ಕೆ ಉಮಾಶಂಕರ್ ತನ್ನ ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳಿ ವಾಪಸ್ ಬರುವಾಗ ಅಪಘಾತವಾಗಿತ್ತು. ಇದರಿಂದಾಗಿ ಹೊಟ್ಟೆ ಮತ್ತು ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಹೀಗಾಗಿ, ಕಳೆದ 10 ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಉಮಾಶಂಕರ್ ಒಂದು ತಿಂಗಳಿನಿಂದ ಸರಿಯಾಗಿ ಔಷಧಿ ಮತ್ತು ಮಾತ್ರೆಗಳನ್ನು ತೆಗೆದುಕೊಳ್ಳುತ್ತಿರಲಿಲ್ಲ. ಹಾಗಾಗಿ, ಆತನಿಗೆ ಸ್ವಲ್ಪ ಬುದ್ಧಿ ಭ್ರಮಣೆಯಾದಂತೆ ಕಾಣುತ್ತಿದ್ದ. ಅಲ್ಲದೇ, ನನಗೆ ಮದುವೆ ಮಾಡು ಎಂದು ತಾಯಿ ಮತ್ತು ಸಂಬಂಧಿಕರನ್ನು ಪೀಡಿಸುತ್ತಿದ್ದ. ಆದರೆ, ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಆತನಿಗೆ ವಧುವನ್ನು ಕೊಡಲು ಯಾರೂ ಮುಂದಾಗುತ್ತಿರಲಿಲ್ಲ.

ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಇದೇ ವಿಚಾರಕ್ಕೆ ತಾಯಿ ಮತ್ತು ಮಗನ ನಡುವೆ ಗಲಾಟೆ ನಡೆದಿದೆ. ಮಗ ಮತ್ತು ತಾಯಿಯ ನಡುವೆ ತಳ್ಳಾಟ ನೂಕಾಟ ನಡೆದಿದ್ದು, ವಯಸ್ಸಾದ ತಾಯಿಯನ್ನು ಬಲವಾಗಿ ತಳ್ಳಿದ್ದರಿಂದ ಮನೆಯ ಪಕ್ಕದಲ್ಲಿನ ಜಮೀನಿಗೆ ತಾಯಿ ಬಿದ್ದಿದ್ದಾರೆ. ಇದೇ ಸಂದರ್ಭದಲ್ಲಿ ಪಕ್ಕದಲ್ಲಿದ್ದ ಕಲ್ಲೊಂದನ್ನು ಎತ್ತಿಕೊಂಡ ಆರೋಪಿ ಉಮಾಶಂಕರ್ ಏಕಾಏಕಿ ತಾಯಿಯ ತಲೆ ಮೇಲೆ ಎತ್ತಿ ಹಾಕಿದ್ದಾನೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ತಾಯಿ ಬಚಾವ್ ಆಗಿದ್ದಾರೆ. ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಾಳು ತಾಯಿಯನ್ನು ಹಾಸನದ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular