HomeKarnatakaಲಾಡ್ಜ್ ರೂಮಿನಲ್ಲಿ ಡೆತ್ ನೋಟ್ ಬರೆದಿಟ್ಟು ಉಪತಹಶಿಲ್ದಾರ್ ಆತ್ಮಹತ್ಯೆ

ಲಾಡ್ಜ್ ರೂಮಿನಲ್ಲಿ ಡೆತ್ ನೋಟ್ ಬರೆದಿಟ್ಟು ಉಪತಹಶಿಲ್ದಾರ್ ಆತ್ಮಹತ್ಯೆ

ಹಾಸನ: ಉಪತಹಶಿಲ್ದಾರ್ ಓರ್ವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ನಗರದ ಬಿಎಂ ರಸ್ತೆ ಲಾಡ್ಜ್ ನಲ್ಲಿ ನಡೆದಿದೆ.

ತಿಮ್ಮಯ್ಯ (52) ಆತ್ಮಹತ್ಯೆಗೆ ಶರಣಾದ ಉಪತಹಶೀಲ್ದಾರ್. ಮೈಸೂರು ಜಿಲ್ಲೆ, ಸಾಲಿಗ್ರಾಮದಲ್ಲಿ ಉಪತಹಶೀಲ್ದಾರ್ ಆಗಿದ್ದ ತಿಮ್ಮಯ್ಯ, ಮೂರು ವರ್ಷಗಳ ಹಿಂದೆ ಹಾಸನದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಈಗ ಹಾಸನ ನಗರದ ಲಾಡ್ಜ್‌ ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಾವಿಗೂ ಮುನ್ನ ಅವರು ಬರೆದಿಟ್ಟಿರುವ 4 ಪುಟದ ಡೆತ್‌ನೋಟ್ ಪತ್ತೆಯಾಗಿದೆ. ಮೂಲತಃ ಕೊಡಗು ಜಿಲ್ಲೆಯವರಾದ ತಿಮ್ಮಯ್ಯ ಹಾಸನ ನಗರದ ಚನ್ನಪಟ್ಟಣದ ದ್ಯಾವಮ್ಮ ಬಡಾವಣೆಯಲ್ಲಿ ಕುಟುಂಬಸ್ಥರೊಂದಿಗೆ ವಾಸವಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular