HomeKarnatakaBIG NEWS: ಶಿಕ್ಷಕಿ ಕಿಡ್ನ್ಯಾಪ್ ಪ್ರಕರಣ; ಆರೋಪಿಗಳ ಪತ್ತೆಗಾಗಿ ಪೊಲೀಸರ 3 ತಂಡ ರಚನೆ

BIG NEWS: ಶಿಕ್ಷಕಿ ಕಿಡ್ನ್ಯಾಪ್ ಪ್ರಕರಣ; ಆರೋಪಿಗಳ ಪತ್ತೆಗಾಗಿ ಪೊಲೀಸರ 3 ತಂಡ ರಚನೆ

ಹಾಸನ: ಶಿಕ್ಷಕಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ಪೊಲೀಸರ ಮೂರು ತಂಡ ರಚಿಸಲಾಗಿದೆ ಎಂದು ಹಾಸನ ಎಸ್ ಪಿ ಸುಜೀತಾ ತಿಳಿಸಿದ್ದಾರೆ.

ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯಲ್ಲಿ ಇಂದು ಬೆಳಿಗ್ಗೆ ಶಿಕ್ಷಕಿ ಅರ್ಪಿತಾ ಅವರನ್ನು ದುಷ್ಕರ್ಮಿಗಳು ಅಪಹರಿಸಿದ್ದು, ಸಿಸಿಟಿವಿ ದೃಶ್ಯ ಹಾಗೂ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಎಸ್ ಪಿ ಸುಜೀತಾ, ಆರೋಪಿಗಳ ಬಂಧನಕ್ಕಾಗಿ ತನಿಖೆ ಚುರುಕುಗೊಂಡಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಬಂಧಿಯೇ ಶಿಕ್ಷಕಿಯನ್ನು ಅಪಹರಣ ಮಾಡಿರುವ ಮಾಹಿತಿ ಇದೆ. ಶಾಲೆಯ ಮುಂದೆಯೇ ಶಿಕ್ಷಕಿಯನ್ನು ಅಪಹರಿಸಲಾಗಿದೆ. ರಾಮು ಎಂಬಾತ ಕಿಡ್ನ್ಯಾಪ್ ಮಾಡಿದ್ದಾನೆ ಎಂದು ಪೋಷಕರು ದೂರು ನೀಡಿದ್ದಾರೆ. ಆತ ಶಿಕ್ಷಕಿ ಕುಟುಂಬದ ಸಂಬಂಧಿ ಎಂದು ತಿಳಿದುಬಂದಿದೆ. ಶೀಘ್ರದಲ್ಲಿ ಆರೊಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular