HomeKarnatakaಹಾಸನ ವಿಮಾನ ನಿಲ್ದಾಣ, ಭೂಮಿ ಕಳೆದುಕೊಂಡವರಿಗೆ ಗುಡ್‌ನ್ಯೂಸ್

ಹಾಸನ ವಿಮಾನ ನಿಲ್ದಾಣ, ಭೂಮಿ ಕಳೆದುಕೊಂಡವರಿಗೆ ಗುಡ್‌ನ್ಯೂಸ್

ಹಾಸನ ವಿಮಾನ ನಿಲ್ದಾಣ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕನಸಿನ ಯೋಜನೆಯಾಗಿದೆ. ಹಾಸನ ನಗರದಿಂದ ಸುಮಾರು 6 ಕಿ.ಮೀ. ದೂರದ ಭುವನಹಳ್ಳಿ ಗ್ರಾಮದ ಸಮೀಪ 516 ಎಕರೆ ಭೂಮಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ.

2006ರಲ್ಲಿ ಹೆಚ್​​.ಡಿ. ದೇವೇಗೌಡರು ವಿಮಾನ ನಿಲ್ದಾಣದ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ್ದರು. ಆದರೆ 2026 ಬಂದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಇದಕ್ಕೆ ವಿವಿಧ ಕಾರಣಗಳಿವೆ. ಕಾಮಗಾರಿಯಂತೂ ನಡೆಯುತ್ತಿದೆ.

ಹಾಸನ ವಿಮಾನ ನಿಲ್ದಾಣ ನಿರ್ಮಾಣದ ಕಾಮಗಾರಿಯನ್ನು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಹಾಗೂ ಹಣಕಾಸು ಇಲಾಖೆಯ ಹಣಕಾಸು ಸುಧಾರಣೆಯ ಕಾರ್ಯದರ್ಶಿ ಡಾ. ವಿಶಾಲ್ ಆರ್. ಪರಿಶೀಲನೆ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭುವನಹಳ್ಳಿ ವಿಮಾನ ನಿಲ್ದಾಣದ ಕಟ್ಟಡಕ್ಕೆ ಭೇಟಿ ನೀಡಿ ಅವರು ಕಾಮಗಾರಿಗಳ ಮಾಹಿತಿ ಪಡೆದರು. ಅಧಿಕಾರಿಗಳ ಸಭೆ ನಡೆಸಿ ವಿಮಾನ ನಿಲ್ದಾಣ ಕಾಮಗಾರಿಗೆ ಅಡಚಣೆ ಆಗಿರುವ ಸಮಸ್ಯೆಗಳನ್ನು ಆಲಿಸಿದರು. ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದರು.

ರೈತರಿಗೆ ಪರಿಹಾರ ನೀಡಲು ಸೂಚನೆ: “ಹಾಸನ ವಿಮಾನ ನಿಲ್ದಾಣಕ್ಕೆ ಸ್ವಾಧೀನ ಪಡಿಸಿಕೊಂಡಿರುವ ಭೂಮಿಗೆ ಪರಿಹಾರ ಹಣ ಬಿಡುಗಡೆಗೆ ಅಗತ್ಯ ಕ್ರಮ ವಹಿಸಲಾಗುವುದು. ಆದ್ಯತೆಯಿರುವ ಸ್ಥಳಗಳಿಗೆ ಮೊದಲ ಆದ್ಯತೆ ನೀಡಿ ಪರಿಹಾರ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ಡಾ. ವಿಶಾಲ್ ಆರ್. ನಿರ್ದೇಶನ ಕೊಟ್ಟರು.

ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ರಸ್ತೆ ನಿರ್ಮಾಣ, ಸರ್ವಿಸ್ ರಸ್ತೆಗಳ ನಿರ್ಮಾಣ, ರೈತರಿಗೆ ಸಮಸ್ಯೆಗಳ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದಿಂದ ವಿಮಾನ ನಿಲ್ದಾಣಕ್ಕೆ ನೀರಿನ ಸಂಪರ್ಕ ಕಲ್ಪಿಸುವ ಕುರಿತು ಹಾಗೂ ಇನ್ನಿತರ ವಿಷಯಗಳ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಿದರು.

“ವಿಮಾನ ನಿಲ್ದಾಣ ಕಾಮಗಾರಿಗೆ ಭೂ ಸ್ವಾಧೀನ ಪಡಿಸಿಕೊಂಡಿರುವ ಜಮೀನುಗಳಲ್ಲಿ ಹಾದು ಹೋಗಿರುವ ಹೈಟೆಕ್ಷನ್ ವಿದ್ಯುತ್ ಲೈನ್ ಸ್ಥಳಾಂತರಕ್ಕೆ ಅನುದಾನ ಬಿಡುಗಡೆ ಕ್ರಮವಹಿಸಲಾಗುವುದು” ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಖುಷ್ಬು ಗೋಯೇಲ್ ಚೌಧರಿ, ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತ, ಅಪರ ಜಿಲ್ಲಾಧಿಕಾರಿ ಜಗದೀಶ್ ಮತ್ತು ಇತರ ಅಧಿಕಾರಿಗಳ ಜೊತೆ ಸರ್ವೀಸ್ ರಸ್ತೆ ನಿರ್ಮಾಣದ ಕುರಿತು ಮಾತುಕತೆ ನಡೆಸಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular