BIG NEWS: ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸಮಾವೇಶ ನಡೆಸಲು ಕಾಂಗ್ರೆಸ್ ಸಿದ್ಧತೆ

ಹಾಸನ: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಮೂರು ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ. ಭರ್ಜರಿ ಗೆಲುವಿನ ಬೆನ್ನಲ್ಲೇ ಸಮಾವೇಶ ನಡೆಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ.

ಡಿಸೆಂಬರ್ 5 ರಂದು ಹಾಸನ ಜಿಲ್ಲೆಯಲ್ಲಿ ಸಮಾವೇಶ ನಡೆಸಲು ಪಕ್ಷದ ನಾಯಕರು ಚಿಂತನೆ ನಡೆಸಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರ ತವರು ಹಾಸನ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ನಡೆಯಲಿದೆ. ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಸಮಾವೇಶ ನಡೆಸುವ ಸಂಬಂಧ ಮಹತ್ವದ ಸಭೆ ನಡೆಸಲಾಗಿದೆ.

ಹಾಸನದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಸಚಿವರಾದ ಬೋಸರಾಜು, ಕೆ, ವೆಂಕಟೇಶ್, ಸಂಸದ ಶ್ರೇಯಸ್ ಪಟೇಲ್, ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಿದ್ದಾರೆ. 5 ಜಿಲ್ಲೆಗಳ ಒಳಗೊಂಡಂತೆ ಸಮಾವೇಶ ನಡೆಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read