HomeKarnatakaಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಯುವಕ: ಮುಂದೆ ನಿಂತು ಇಬ್ಬರಿಗೂ ಮದುವೆ ಮಾಡಿಸಿದ...

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಯುವಕ: ಮುಂದೆ ನಿಂತು ಇಬ್ಬರಿಗೂ ಮದುವೆ ಮಾಡಿಸಿದ ಪೊಲೀಸರು

ಹಾಸನ: ಯುವಕನೊಬ್ಬ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಮಗು ಕರುಣಿಸಿ ಕೈಕೊಟ್ಟ ಘಟನೆ ಹಾಸನ ಜಿಲ್ಲೆಯ ಆಲೂರು ಪಟ್ಟಣದಲ್ಲಿ ನಡೆದಿದೆ.

ಬೀರಕನಹಳ್ಳಿ ಗ್ರಾಮದ ರಾಜು ಯುವತಿಯನ್ನು ನಂಬಿಸಿ ಆಕೆಯನ್ನು ಗರ್ಭವತಿಯನ್ನಾಗಿಸಿದ್ದಾನೆ. ಅನ್ನಪೂರ್ಣ ರಾಜುವಿನಿಂದ ಮೋಸ ಹೋಗಿದ್ದ ಯುವತಿ. ರಾಜು ಮತ್ತು ನಿಲುವಾಗಿಲು ಗ್ರಾಮದ ಅನ್ನಪೂರ್ಣ ಪರಸ್ಪರ ಪ್ರೀತಿಸುತ್ತಿದ್ದರು. ಒಂದು ವರ್ಷ ಇಬ್ಬರೂ ಒಟ್ಟಿಗಿದ್ದರು. ಮದುವೆಯಾಗುವುದಾಗಿ ರಾಜು ಅನ್ನಪೂರ್ಣಗೆ ಭರವಸೆ ನೀಡಿದ್ದ. ಈ ನಡುವೆ ಅನ್ನಪೂರ್ಣ ಗರ್ಭಿಣಿಯಾಗಿ ಒಂದು ಮಗುವಿಗೆ ಜನ್ಮ ನೀಡಿದ್ದಾಳೆ. ಮಗು ಜನಿಸಿದ ಬಳಿಕ ರಾಜು ಮದುವೆಯಾಗದೇ ಎಸ್ಕೇಪ್ ಆಗಿದ್ದ. ಪ್ರಿಯತಮೆ ಹಾಗೂ ಮಗುವನ್ನು ಬಿಟ್ಟು ಪರಾರಿಯಾಗಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನನೊಂದ ಯುವತಿ ಪೊಲೀಸರಿಗೆ ದೂರು ನೀಡಿದ್ದರು. ತಲೆಮರೆಸಿಕೊಂಡಿದ್ದ ಆರೋಪಿ ರಾಜುನನ್ನು ಪೊಲೀಸರು ಹುಡುಕಿ ಠಾಣೆಗೆ ಕರೆತಂದಿದ್ದಾರೆ. ಯುವಕನಿಗೆ ಪೊಲೀಸರು ಮತ್ತು ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್) ಮುಖಂಡರು ಸೇರಿ ಬುದ್ಧಿವಾದ ಹೇಳಿದ್ದಾರೆ. ರ್ರಾಜು ಹಾಗೂ ಅನ್ನಪೂರ್ಣ ಇಬ್ಬರಿಗೂ ಮದುವೆ ಮಾಡಿಸಿದ್ದಾರೆ.

ಅಂತಿಮವಾಗಿ, ಸ್ಥಳೀಯ ಅಂಬೇಡ್ಕರ್ ಪುತ್ತಳಿ ಎದುರು ರಾಜು ಮತ್ತು ಅನ್ನಪೂರ್ಣಗೆ ಮದುವೆ ಮಾಡಿಸಿದ್ದಾರೆ. ಈ ಮೂಲಕ ವಂಚನೆಗೊಳಗಾಗಿದ್ದ ಯುವತಿಗೆ ನ್ಯಾಯ ಒದಗಿಸುವ ಪ್ರಯತ್ನ ಮಾಡಲಾಗಿದೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular