HomeKarnatakaಸತತ 7ನೇ ಬಾರಿಗೆ ಹಾಸನ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಹೆಚ್.ಡಿ. ರೇವಣ್ಣ ಅವಿರೋಧ ಆಯ್ಕೆ

ಸತತ 7ನೇ ಬಾರಿಗೆ ಹಾಸನ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಹೆಚ್.ಡಿ. ರೇವಣ್ಣ ಅವಿರೋಧ ಆಯ್ಕೆ

ಹಾಸನ: ಹಾಸನ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಸತತ 7ನೇ ಬಾರಿಗೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಾಸನದ ಹಾಮುಲ್ ಸಭಾಂಗಣದಲ್ಲಿ ನಡೆದ ಆಡಳಿತ ಮಂಡಳಿ ನಿರ್ದೇಶಕರ ಸಭೆಯಲ್ಲಿ ರೇವಣ್ಣ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲು ನಿರ್ದೇಶಕರು ಒಪ್ಪಿಗೆ ನೀಡಿದ್ದಾರೆ. 1985ರಲ್ಲಿ ನಿರ್ದೇಶಕರಾಗಿ ಆಯ್ಕೆಯಾಗಿದ್ದ ಹೆಚ್.ಡಿ. ರೇವಣ್ಣ 1994 ರಿಂದ ಸತತವಾಗಿ ಹಾಮುಲ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಅವರು 2024 ರಿಂದ 2029 ರವರೆಗೆ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ. 14 ಮಂದಿ ನಿರ್ದೇಶಕರ ಸ್ಥಾನಕ್ಕೆ ಇತ್ತೀಚೆಗೆ ಚುನಾವಣೆ ನಡೆದು ಎಲ್ಲಾ ಸ್ಥಾನಗಳಿಗೂ ಅವಿರೋಧ ಆಯ್ಕೆಯಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular