‘ಹಾಸನಾಂಬ ದೇವಿ’ ಜಾತ್ರಾ ಮಹೋತ್ಸವ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಹಾಸನ :  ಶ್ರೀ ಹಾಸನಾಂಬ ದೇವಿಯ ದರ್ಶನಕ್ಕೆ ಆಗಮಿಸುವ ಜನ ಸಂದಣಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ಭಕ್ತಾದಿಗಳಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲು ಅಗತ್ಯ ಸಿದ್ಧತೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಶ್ರೀ ಸಿದ್ಧೇಶ್ವರ ಜಾತ್ರ ಮಹೋತ್ಸವ ಹಾಗೂ ಹಾಸನಾಂಬ ದೇವಿ ದರ್ಶನ ಕುರಿತು ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಈಗಾಗಲೇ ರಚಿಸಿರುವ ವಿವಿಧ ಸಮಿತಿಗಳು ಸಮನ್ವಯತೆಯಿಂದ ತಮ್ಮ ತಮ್ಮ ಕೆಲಸವನ್ನು ಜವಾಬ್ದಾರಿಯುವಾಗಿ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ತಿಳಿಸಿದರು.

ದೇವಿ ದರ್ಶನಕ್ಕೆ ಆಗಮಿಸುವ ಭಕ್ತರ ಜನಸಂದಣಿಯನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಲು ಪ್ರತಿನಿತ್ಯ ಬಸ್, ರೈಲುಗಳ ಮೂಲಕ ಹಾಗೂ ಟೋಲ್ ಗಳನ್ನು ಹೊರತುಪಡಿಸಿ ಇತರೆ ಮಾರ್ಗಗಳಲ್ಲಿ ನಗರಕ್ಕೆ ಪ್ರವೇಶಿಸುವ ವಾಹನಗಳ ಮಾಹಿತಿಯನ್ನು ಅಧಿಕಾರಿಗಳು ನೀಡುವಂತೆ ತಿಳಿಸಿದರು.

ವಾಹನಗಳ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆ ಜೊತೆಗೆ ಪಾದರಕ್ಷೆಗಳನ್ನು ಬಿಡಲು ಸ್ಟಾö್ಯಂಡ್, ಟಿಕೆಟ್ ಕೌಂಟರ್, ಸಾಂಸ್ಕೃತಿಕ ಕಾರ್ಯಕ್ರಮ, ವಸ್ತುಗಳ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಬೇಕು ಎಂದ ಅವರು ಜನರ ಸುರಕ್ಷತೆಯ ದೃಷ್ಠಿಯಿಂದ ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ಬ್ಯಾರಿಕೇಡ್‌ಗಳು ಸುಸ್ಥಿತಿಯಲ್ಲಿರುವುದನ್ನು ಪರಿಶೀಲಿಸಬೇಕು ಎಂದರು.ದೇವಿ ದರ್ಶನಕ್ಕೆ ಆಗಮಿಸುವ ಭಕ್ತಾಧಿಗಳು ಸ್ಥಳೀಯವಾಗಿ ಪ್ರವಾಸ ಮಾಡಲು ಟೂರ್ ಪ್ಯಾಕೇಜ್ ಮಾಡುವಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್,ಅಪರ ಜಿಲ್ಲಾಧಿಕಾರಿ ಮಂಜುನಾಥ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು, ತಮ್ಮಯ್ಯ, ಉಪ ವಿಭಾಗಾಧಿಕಾರಿಗಳಾದ ಮಾರುತಿ, ರಾಜೇಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read