HomeLatest Newsಇಂದಿನಿಂದ ಹಾಸನಾಂಬ ದೇಗುಲ ಓಪನ್: ದೇವಿ ದರ್ಶನದ ವೇಳಾಪಟ್ಟಿ

ಇಂದಿನಿಂದ ಹಾಸನಾಂಬ ದೇಗುಲ ಓಪನ್: ದೇವಿ ದರ್ಶನದ ವೇಳಾಪಟ್ಟಿ

ಹಾಸನ: ಶ್ರೀ ಹಾಸನಾಂಬ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಅ.9 ರಂದು ಪ್ರಾರಂಭವಾಗಲಿದೆ. ಮಧ್ಯಾಹ್ನ 12 ಗಂಟೆಗೆ ಶ್ರೀ ಹಾಸನಾಂಬ ದೇವಿಯ ದೇವಾಲಯದ ಬಾಗಿಲನ್ನು ತೆರೆಯಲಾಗುತ್ತದೆ. ಅ.23 ರಂದು ದೇವಾಲಯದ ಬಾಗಿಲನ್ನು ಮುಚ್ಚಲಾಗುತ್ತದೆ. ಭಕ್ತರಿಗೆ ಅ.10 ರಿಂದ ಅ.23 ರವರೆಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ತುಮಕೂರು ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಾಜಿ ಪ್ರಧಾನ ಮಂತ್ರಿ ಹಾಗೂ ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡರು, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಗೌರವ ಉಪಸ್ಥಿತಿವಹಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಂದಾಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ, ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಕರ್ನಾಟಕ ರಾಜ್ಯ ಗೃಹ ಮಂಡಳಿಯ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಎಂ.ಶಿವಲಿಂಗೇಗೌಡ ಅವರು ಘನ ಉಪಸ್ಥಿತಿವಹಿಸಲಿದ್ದಾರೆ. ಶಾಸಕರಾದ ಸ್ವರೂಪ್ ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಂಸದರಾದ ಶ್ರೇಯಸ್ ಎಂ.ಪಟೇಲ್, ಶಾಸಕರುಗಳಾದ ಹೆಚ್.ಡಿ.ರೇವಣ್ಣ, ಡಾ.ಸಿ.ಎನ್.ಬಾಲಕೃಷ್ಣ, ಎ.ಮಂಜು, ಹೆಚ್.ಕೆ.ಸುರೇಶ್, ಸಿಮೆಂಟ್ ಮಂಜು, ವಿಧಾನ ಪರಿಷತ್ ಶಾಸಕರುಗಳಾದ ಮಧು ಜಿ.ಮಾದೇಗೌಡ, ಕೆ.ವಿವೇಕಾನಂದ, ಡಾ|| ಸೂರಜ್ ರೇವಣ್ಣ ಹಾಗೂ ಮಹಾನಗರ ಪಾಲಿಕೆಯ ಮಹಾಪೌರರಾದ ಗಿರೀಶ್ ಚನ್ನವಿರಪ್ಪ ಅವರು ಭಾಗವಹಿಸಲಿದ್ದಾರೆ.

ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯ ದತ್ತಿಗಳ ಇಲಾಖೆಯ ಆಯುಕ್ತರಾದ ಡಾ.ವೆಂಕಟೇಶ್ ಎಂ.ವಿ, ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪೂರ್ಣಿಮಾ ಬಿ.ಆರ್, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಉಪ ವಿಭಾಗಾಧಿಕಾರಿ ಹಾಗೂ ಶ್ರೀ ಹಾಸನಾಂಬ ದೇವಾಲಯದ ಆಡಳಿತಾಧಿಕಾರಿ ಮಾರುತಿ ಜೆ.ಬಿ, ತಹಸೀಲ್ದಾರ್ ಗೀತಾ ಸಿ.ಜಿ ಭಾಗವಹಿಸಲಿದ್ದಾರೆ.

ಅ.10 ರಿಂದ ಅ.17 ರವರೆಗೆ ಬೆ.10 ರಿಂದ ಮ.01 ಗಂಟೆಯವರೆಗೆ ಮಾತ್ರ ಶಿಷ್ಟಾಚಾರ ದರ್ಶನಕ್ಕೆ ಅವಕಾಶವಿರುತ್ತದೆ. ಅ.18 ರಿಂದ ಅ.22 ರವರೆಗೆ ಯಾವುದೇ ರೀತಿಯ ಶಿಷ್ಟಾಚಾರ ದರ್ಶನಕ್ಕೆ ಅವಕಾಶ ಇರುವುದಿಲ್ಲ.

ದರ್ಶನದ ವೇಳಾಪಟ್ಟಿ

ಅಕ್ಟೋಬರ್ 9 (ಗುರುವಾರ)

ಮಧ್ಯಾಹ್ನ 12 ಗಂಟೆಗೆ ದೇವಾಲಯ ತೆರೆಯಲಾಗುತ್ತದೆ – ಪೂಜೆ ಮತ್ತು ಆಚರಣೆ ಮಾತ್ರ. ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ

ಅಕ್ಟೋಬರ್ 10 (ಶುಕ್ರವಾರ)

ಬೆಳಿಗ್ಗೆ 6ರಿಂದ ಸಂಜೆ 7ರವರೆಗೆ ಸಾರ್ವಜನಿಕ ದರ್ಶನ

ಅಕ್ಟೋಬರ್ 11 ರಿಂದ 22ರವರೆಗೆ

ದೇವಾಲಯ ದರ್ಶನ ಬೆಳಿಗ್ಗೆ 6 ರಿಂದ ರಾತ್ರಿಯಿಡೀ ತೆರೆದಿರುತ್ತದೆ

ಮುಚ್ಚಿರುವ ಸಮಯ

ಬೆಳಿಗ್ಗೆ 2ರಿಂದ 5ರವರೆಗೆ

ಮಧ್ಯಾಹ್ನ 2ರಿಂದ 3.30ರವರೆಗೆ

ಅಕ್ಟೋಬರ್ 22 (ಬುಧವಾರ)

ಸಂಜೆ 7 ಗಂಟೆಗೆ ಸಾರ್ವಜನಿಕ ದರ್ಶನ ಮುಕ್ತಾಯ

ಅಕ್ಟೋಬರ್ 23 (ಗುರುವಾರ)

ಅಂತಿಮ ಪೂಜೆಯ ನಂತರ ದೇವಾಲಯ ಮುಚ್ಚಲಾಗುತ್ತದೆ.

ಸಾರ್ವಜನಿಕ ಪ್ರವೇಶ ಇರುವುದಿಲ್ಲ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular