HomeKarnatakaSHOCKING : ಹಾಸನದ S.P ಕಚೇರಿಯಲ್ಲೇ ಚಾಕು ಇರಿದು ಪತ್ನಿಯನ್ನು ಹತ್ಯೆಗೈದ ಕಾನ್ಸ್ ಟೇಬಲ್..!

SHOCKING : ಹಾಸನದ S.P ಕಚೇರಿಯಲ್ಲೇ ಚಾಕು ಇರಿದು ಪತ್ನಿಯನ್ನು ಹತ್ಯೆಗೈದ ಕಾನ್ಸ್ ಟೇಬಲ್..!

ಹಾಸನ: ಕಾನ್ಸ್ಟೇಬಲ್ ಪತಿಯೋರ್ವ ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಪತ್ನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಬೆಚ್ಚಿಬೀಳಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ನೀಡಲು ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.

ಹಾಸನ ನಗರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಲೋಕನಾಥ್ ಮತ್ತು ಮಮತಾ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು. ಕಳೆದ ಕೆಲವು ದಿನಗಳ ಹಿಂದೆ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲು ಎಸ್ಪಿ ಕಚೇರಿಗೆ ಪತ್ನಿ ಬಂದಿದ್ದಾರೆ.

ಇದನ್ನು ಗಮನಿಸಿದ ಪತಿ ಲೋಕನಾಥ್ ಆವರಣದಲ್ಲೇ ಮಮತಾಗೆ ಚೂರಿ ಇರಿದಿದ್ದಾನೆ. ಕೂಡಲೇ ಅಲ್ಲಿದ್ದವರು ಮಮತಾ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಮತಾ ಮೃತಪಟ್ಟಿದ್ದಾರೆ. ಆರೋಪಿ ಲೋಕನಾಥ್ನನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular