HomeKarnatakaಯತ್ನಾಳ್ ವಿರುದ್ಧದ ದ್ವೇಷ ಭಾಷಣ ಪ್ರಕರಣ ರದ್ದು: ಹೈಕೋರ್ಟ್ ಆದೇಶ

ಯತ್ನಾಳ್ ವಿರುದ್ಧದ ದ್ವೇಷ ಭಾಷಣ ಪ್ರಕರಣ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ.

ಯತ್ನಾಳ್ ಅವರು ಪ್ರಕರಣ ರದ್ದು ಮಾಡುವಂತೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಿಂದ ಈ ಆದೇಶ ನೀಡಲಾಗಿದೆ.

ಅರ್ಜಿದಾರರ ಪರವಾದ ಮಂಡಿಸಿದ ವಕೀಲ ಪಿ. ವೆಂಕಟೇಶ್ ದಳವಾಯಿ ಅವರು, ಅರ್ಜಿದಾರರ ಭಾಷಣದಲ್ಲಿ ಜಾತಿ ಧರ್ಮಗಳ ನಡುವೆ ದ್ವೇಷ ಬಿತ್ತುವ ಯಾವುದೇ ಉದ್ದೇಶವಿಲ್ಲ. ಅರ್ಜಿದಾರರ ವಿರುದ್ಧದ ಆರೋಪಗಳೆಲ್ಲವೂ ಸತ್ಯಕ್ಕೆ ದೂರವಾಗಿದ್ದು, ಪ್ರಕರಣ ರದ್ದುಗೊಳಿಸಬೇಕೆಂದು ಮನವಿ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2023ರ ಅಕ್ಟೋಬರ್ 7ರಂದು ಹಾವೇರಿ ಜಿಲ್ಲೆ ಬಂಕಾಪುರದಲ್ಲಿ ಹಿಂದೂ ಮಹಾಗಣಪತಿ ಸೇವಾ ಸಮಿತಿ ಆಯೋಜಿಸಿದ್ದ ಸಮಾವೇಶದಲ್ಲಿ ಭಾಗವಹಿಸಿದ್ದ ಯತ್ನಾಳ್ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಬೆಳಗಾವಿಯಲ್ಲಿ ಪಾಕಿಸ್ತಾನದ ಧ್ವಜ ಹಾರಿದೆ. ಅವರೆಲ್ಲರೂ ಸರ್ಕಾರದ ಮೊಮ್ಮಕ್ಕಳು, ನಮ್ಮದು ಸಂಸ್ಕೃತಿ ಬಿಂಬಿಸುವ ದೇಶ. ನಮ್ಮ ಗಣಪನ ಮೆರವಣಿಗೆ ಅವರ ಓಣಿಯಲ್ಲಿ ಹೋದರೆ ಉರಿಯುತ್ತದೆ. ಆ ಮಕ್ಕಳು ನಮ್ಮ ದೇಶದ ಅನ್ನ ತಿಂದು ಪಾಕಿಸ್ತಾನ ಪರವಾಗಿ ಜೈಕಾರ ಹಾಕುತ್ತಿದ್ದಾರೆ ಎಂದು ಭಾಷಣ ಮಾಡಿದ್ದರು.

ಸೌಹಾರ್ದತೆಗೆ ಧಕ್ಕೆ ತರುವ, ಧರ್ಮಗಳ ನಡುವೆ ದ್ವೇಷ ಬಿತ್ತುವ ಕಾರ್ಯಕ್ಕೆ ಯತ್ನಾಳ್ ಮುಂದಾಗಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular