ಮೋದಿಯಿಂದ ಉಗ್ರವಾದ ಮಾದರಿ ದ್ವೇಷ ಭಾಷಣ: ಜಾಗೃತ ನಾಗರಿಕರು ಕರ್ನಾಟಕ ಸಂಘಟನೆ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಪಕ್ಷ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತದೆ. ಭೂಮಿ, ಒಡವೆ, ವಸ್ತು, ಹೆಣ್ಣು ಮಕ್ಕಳ ಮಂಗಳಸೂತ್ರವನ್ನು ಕೂಡ ಮುಸ್ಲಿಮರಿಗೆ ಕೊಡಲಾಗುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ದ್ವೇಷ ಭಾಷಣದ ಅತ್ಯಂತ ಕೆಟ್ಟ ಉಗ್ರವಾದದ ಮಾದರಿಯಾಗಿದೆ ಎಂದು ಜಾಗೃತ ನಾಗರಿಕರು ಕರ್ನಾಟಕ ಸಂಘಟನೆ ಟೀಕಿಸಿದೆ.

ಸಂಘಟನೆಯ ಪ್ರಮುಖರಾದ ಕೆ. ಮರುಳ ಸಿದ್ದಪ್ಪ, ಜಿ. ರಾಮಕೃಷ್ಣ, ಎಸ್‌.ಜಿ. ಸಿದ್ದರಾಮಯ್ಯ, ರಾಜೇಂದ್ರ ಚೆನ್ನಿ, ವಿಮಲಾ ಕೆ.ಎಸ್., ಮಾವಳ್ಳಿ ಶಂಕರ್, ಜಾಣಗೆರೆ ವೆಂಕಟರಾಮಯ್ಯ, ಬಂಜಗೆರೆ ಜಯಪ್ರಕಾಶ್ ಮೊದಲಾದವರು ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಅವರು ಹೀಗೆ ಮಂಗಳಸೂತ್ರವನ್ನೂ ಮುಸ್ಲಿಮರಿಗೆ ಕೊಡಲಾಗುತ್ತದೆ ಎಂದು ಹೇಳುವ ಮೂಲಕ ಅಲ್ಪಸಂಖ್ಯಾತರನ್ನು ಹೀಯಾಳಿಸುವ ಜೊತೆಗೆ ಬಹುಸಂಖ್ಯಾತ ಸಮುದಾಯವನ್ನು ಹೆದರಿಸಿದ್ದಾರೆ. ಇಂತಹ ಭಾಷಣಗಳು ಉಂಟು ಮಾಡುವ ಪರಿಣಾಮಗಳನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಚುನಾವಣೆ ಮುಗಿದ ನಂತರವೂ ಇದರ ಗಾಯಗಳು ದಶಕಗಳ ಕಾಲ ಉಳಿಯುತ್ತವೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read