HomeKarnatakaBREAKING NEWS: ಹಟ್ಟಿ ಚಿನ್ನದ ಗಣಿಯಲ್ಲಿ ದುರಂತ: ಮಣ್ಣು ಕುಸಿದು ಕಾರ್ಮಿಕ ಸಾವು

BREAKING NEWS: ಹಟ್ಟಿ ಚಿನ್ನದ ಗಣಿಯಲ್ಲಿ ದುರಂತ: ಮಣ್ಣು ಕುಸಿದು ಕಾರ್ಮಿಕ ಸಾವು

ರಾಯಚೂರು: ಹಟ್ಟು ಚಿನ್ನದ ಗಣಿಯಲ್ಲಿ ದುರಂತ ಸಂಭವಿಸಿದ್ದು, ಮಣ್ಣು ಕುಸಿದ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿರಿರುವ ಹಟ್ಟಿ ಚಿನ್ನದ ಗಣಿಯಲ್ಲಿ ಈ ಘಟನೆ ನಡೆದಿದೆ. 48 ವರ್ಷದ ಮೌನೇಶ್ ಮೃತ ಕಾರ್ಮಿಕ.

ಚಿನ್ನದ ಗಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಮಣ್ಣು ಕುಸಿದಿದೆ. ಮೌನೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೂವರನ್ನೂ ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular