ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಘೋಸ್ಟ್’ ರಿಲೀಸ್‌ ಗೆ ಡೇಟ್‌ ಫಿಕ್ಸ್

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಬಹು ನಿರೀಕ್ಷಿತ ಘೋಸ್ಟ್ ಸಿನಿಮಾ ಅಕ್ಟೋಬರ್ 19ಕ್ಕೆ ವಿಶ್ವಾದ್ಯಂತ ತೆರೆ ಕಾಣಲಿದೆ.‌

ಈ ಕುರಿತು ಶಿವರಾಜ್ ಕುಮಾರ್ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಪೇಜ್‌ ನಲ್ಲಿ ಅಪ್ಲೋಡ್ ಮಾಡಿದ್ದು, ಅವರ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಚಿತ್ರತಂಡ ಈ ಘೋಷಣೆ ಮಾಡಿದ್ದು ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ.

ಎಂ ಜಿ ಶ್ರೀನಿವಾಸ್ ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಪ್ರಮುಖ ಪಾತ್ರ ಒಂದರಲ್ಲಿ ಕಾಣಿಸಿಕೊಂಡಿದ್ದು, ಶಿವರಾಜ್ ಕುಮಾರ್ ಸೇರಿದಂತೆ ಜಯರಾಮ್, ಅನುಪಮ್ ಕೇರ್, ಕೆಜಿಎಫ್ ಖ್ಯಾತಿಯ ಅರ್ಚನಾ ಜೋಯಿಸ್, ಸತ್ಯ ಪ್ರಕಾಶ್ ಹಾಗೂ ಪ್ರಶಾಂತ್ ಬಣ್ಣ ಹಚ್ಚಿದ್ದಾರೆ. ಸಂದೇಶ್ ನಾಗರಾಜ್ ತಮ್ಮ ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read