HomeKarnatakaಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ: ಹವಾಮಾನ ಇಲಾಖೆಯಿಂದ ಈ ಜಿಲ್ಲೆಗಳಲ್ಲಿ...

ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ: ಹವಾಮಾನ ಇಲಾಖೆಯಿಂದ ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಅಬ್ಬರ ಜೋರಾಗಿದ್ದು, ಇನ್ನೂ ಎರಡು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡು ಹಾಗೂ ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪ ವ್ಯಾಪ್ತಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಹಾಗೂ ಟ್ರಫ್‌ಗಳ ಪರಿಣಾಮವಾಗಿ ರಾಜ್ಯದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನಿಟ್ಟಿನಲ್ಲಿ ಅಕ್ಟೋಬರ್ 17 ಹಾಗೂ ಅಕ್ಟೋಬರ್ 18ರಂದು ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಪ್ರಮುಖವಾಗಿ ಅ.17ರಂದು ಮೂರು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಿಸಿಸಲಾಗಿದೆ.

ಅಕ್ಟೋಬರ್ .17ರಂದು ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅಕ್ಟೋಬರ್ .18ರಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಕಲಬುರಗಿ, ಬೀದರ್, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಟಿಡಿಪಿ ಹಾಗೂ ವೈಎಸ್ ಆರ್ ಸಿಪಿ ಕಾರ್ಯಕರ್ತ್ಯರ ನಡುವೆ ಸಂಘರ್ಷ: YSRCP ಕಚೇರಿ ಬಳಿ ಸಿಕ್ಕ ಸಿಕ್ಕ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ

ಹೈದರಾಬಾದ್: ಪಟ್ಟಣ ಪಂಚಾಯತ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಟಿಡಿಪಿ ಹಾಗೀ ವೈ ಎಸ್ ಆರ್ ಸಿಪಿ ಕಾರ್ಯಕರ್ತರ ನಡುವೆ ಸಂಘರ್ಷ ಆರಂಭವಾಗಿ, ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ವೈಎಸ್ ಆರ್ ಸಿಪಿ ಕಚೇರಿ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿರುವ ಘಟನೆ ಆಂಧ್ರದಲ್ಲಿ ನಡೆದಿದೆ.

ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಟಿಡಿಪಿ ಹಾಗೂ ವೈಎಸ್ ಆರ‍್ ಸಿಪಿ ಕಾರ್ಯಕರ್ತರ ನಡುವೆ ಗಲಾಟೆ ಭುಗಿಲೆದ್ದಿದೆ. ವೈಎಸ್ ಆರ‍್ ಸಿಪಿ ಕಚೇರಿ ಮುಂದೆ ಇಲ್ಲಿಸಿದ್ದ ಸಿಕ್ಕ ಸಿಕ್ಕ ವಾಹನಗಳಿಗೆ ಟಿಡಿಪಿ ಕಾರ್ಯಕರ್ತರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಟ್ಟಣ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಇಂದು ಟಿಡಿಪಿ ಹಾಗೂ ವೈಎಸ್ ಆರ‍್ ಸಿಪಿ ನಾಯಕರು ಹಾಗೂ ಕಾರ್ಯಕರ್ತರು ನಾಮಪತ್ರ ಸಲ್ಲಿಸಲು ಆಗಮಿಸಿದ್ದರು, ಈ ವೇಳೆ ವೈಎಸ್ ಆರ್ ಪಿ ಸಂಸದ ಮಿಥುನ್ ರೆಡ್ಡಿ ಕಾರಿಗೆ ಟಿಡಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಮಿಥುನ್ ರೆಡ್ಡಿ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಮಿಥುನ್ ರೆಡ್ಡಿ ಗಾಯಗೊಂಡಿದ್ದಾರೆ. ಈ ಘಟನೆಯಿಂದ ರೊಚ್ಚಿಗೆದ್ದ ವೈಎಸ್ ಆರ್ ಸಿಪಿ ಕಾರ್ಯಕರ್ತರು ಸ್ಥಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಗಲಾಟೆ, ಹೊಡೆದಾಟ ಆರಂಭವಾಗಿದೆ. ವೈಎಸ್ ಆರ್ ಸಿಪಿ ಕಚೇರಿ ಬಳಿ ನಿಲ್ಲಿಸಿದ್ದ ಸಿಕ್ಕ ಸಿಕ್ಕ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಘಟನಾ ಸ್ಥಳಕ್ಕೆ ಪೊಲಿಸರು ದೌಡಾಯಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular