ಗಮನಿಸಿ : ನೀವಿನ್ನೂ ‘ಯುವನಿಧಿ’ಗೆ ಅರ್ಜಿ ಹಾಕಿಲ್ವಾ..? ಹಾಗಾದ್ರೆ ಈ VIDEO ನೋಡಿ!

ಬೆಂಗಳೂರು : ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಜನವರಿ 12ರಂದು ಚಾಲನೆ ಸಿಗಲಿದೆ.

ನೀವಿನ್ನೂ ಅರ್ಜಿ ಹಾಕಿಲ್ವಾ..? ಅಥವಾ ಅರ್ಜಿ ಸಲ್ಲಿಸುವುದು ಹೇಗೆ..? ಎಂಬುದು ಗೊತ್ತಾಗಿಲ್ವಾ..? ಹಾಗಾದ್ರೆ ಈ ವಿಡಿಯೋ ನೋಡಿ.

https://twitter.com/KarnatakaVarthe/status/1741102058177200515?ref_src=twsrc%5Etfw%7Ctwcamp%5Etweetembed%7Ctwterm%5E1741102058177200515%7Ctwgr%5E6bc2932a80dae17c7ade3d0af73b24cb4c1866ec%7Ctwcon%5Es1_&ref_url=https%3A%2F%2Fvistaranews.com%2Fjob%2Ffor-yuva-nidhi-scheme-registration-watch-this-video%2F550897.html

ಅರ್ಹತೆ:

1. 2023ರಲ್ಲಿ ಪದವಿ/ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳು
2. ಪದವಿ/ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ/ ಖಾಸಗಿ ಉದ್ಯೋಗ ಹೊಂದಿಲ್ಲದವರು
3. ಸ್ವಯಂ ಉದ್ಯೋಗ ಹೊಂದಿಲ್ಲದವರು
4. ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು
5. ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 6 ವರ್ಷಗಳವರೆಗೆ ಪದವಿ/ಡಿಪ್ಲೋಮಾದವರೆಗೆ ಅಧ್ಯಯನ ಮಾಡಿದವರು)

6. ನೋಂದಣಿಗೆ ಅಗತ್ಯವಿರುವ ದಾಖಲಾತಿಗಳು- ಎಸ್.ಎಸ್.ಎಲ್.ಸಿ., ಪಿಯುಸಿ, ಪದವಿ/ ಡಿಪ್ಲೋಮಾ ಪ್ರಮಾಣ ಪತ್ರಉಚಿತವಾಗಿ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಖಾಪೂಜಿ ಸೇವಾ ಕೇಂದ್ರಗಳಲ್ಲಿ ಕೂಡ ಅರ್ಜಿ ಸಲ್ಲಿಸಬಹುದು. ನೋಂದಣಿಯಲ್ಲಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಹಾಗೂ ಆಧಾರ್ ಅಂಕ್ಸ್ ಮೊಬೈಲ್ ಸಂಖ್ಯೆಯ ವಿವರ ನೀಡಬೇಕು. ರಾಜ್ಯ ಸರ್ಕಾರದ 5ನೇ ಗ್ಯಾರಂಟಿ “ಯುವನಿಧಿ” ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ Helpline No. 1800 599 9918 ಸಂಪರ್ಕಿಸಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read