ನಿಮ್ಮ ಮನೆಗೂ ಈ ‘ಸ್ಟಿಕ್ಕರ್’ ಅಂಟಿಸಿದ್ದಾರಾ..? ಯಾವುದೇ ಕಾರಣಕ್ಕೂ ತೆಗೆಯಬೇಡಿ.!

ಬೆಂಗಳೂರು : ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಮನೆಗೆ ಮನೆಗೆ ಸ್ಟಿಕ್ಕರ್ ಅಂಟಿಸುವ ಕೆಲಸ ನಡೆಯುತ್ತಿದೆ. ಸಿಬ್ಬಂದಿಗಳು ಪ್ರತಿ ಮನೆಗೆ ಬಂದು ಸ್ಟಿಕ್ಕರ್ ಅಂಟಿಸಿ ಹೋಗುತ್ತಿದ್ದಾರೆ. ಏನಿದು ಸ್ಟಿಕ್ಕರ್. ? ಏನಕ್ಕೆ ಸ್ಟಿಕ್ಕರ್ ಅಂಟಿಸಲಾಗುತ್ತಿದೆ..? ಇಲ್ಲಿದೆ ನೋಡಿ ಸಿಎಂ ಸಿದ್ದರಾಮಯ್ಯ ನೀಡಿದ ಮಾಹಿತಿ.

ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಈ ಸಮೀಕ್ಷೆ ಕಾರ್ಯದಲ್ಲಿ ಮನೆ ಪಟ್ಟಿ ಅಂದರೆ ಹೌಸ್ ಲಿಸ್ಟಿಂಗ್ ಎಕ್ಸರ್ಸೈಜ್ ಮಾಡಲಾಗುತ್ತಿದೆ. ಇದರ ಭಾಗವಾಗಿ ಇಂದು ಆಯೋಗದ ಸಿಬ್ಬಂದಿಗಳು ನನ್ನ ನಿವಾಸಕ್ಕೆ ಭೇಟಿ ನೀಡಿ, ಸ್ಟಿಕ್ಕರ್ ಅಂಟಿಸಿದರು. ಇದೇ ಮಾದರಿಯಲ್ಲಿ ರಾಜ್ಯದ ಪ್ರತಿ ಮನೆಗೆ ಸಿಬ್ಬಂದಿಗಳು ಭೇಟಿನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿನೀಡಿ ಸಮೀಕ್ಷೆ ಕೈಗೊಳ್ಳಲಿದ್ದಾರೆ. ಈ ವೇಳೆ ಅವರಿಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಕೋರುತ್ತೇನೆ ಎಂದು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read