HomeKarnatakaಕಾರಿನಲ್ಲಿ ಸಾಗಿಸುತ್ತಿದ್ದ 75 ಲಕ್ಷ ಹಣ ಜಪ್ತಿ

ಕಾರಿನಲ್ಲಿ ಸಾಗಿಸುತ್ತಿದ್ದ 75 ಲಕ್ಷ ಹಣ ಜಪ್ತಿ

ಹಾವೇರಿ: ಸೂಕ್ತ ದಾಖಲೆಗಳಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 75 ಲಕ್ಷ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೆಬೆನ್ನೂರಿನಲ್ಲಿ ನಡೆದಿದೆ.

ಮೊಟೆಬೆನ್ನೂರು ಚೆಕ್ ಪೋಸ್ಟ್ ಬಳಿ ಕಾರನ್ನು ತಡೆದು ಪರಿಶೀಲಿಸಿದಾಗ ಅಕ್ರಮವಾಗಿ ಹಣ ಸಾಗಿಸುತ್ತಿರುವುದು ತಿಳಿದುಬಂದಿದೆ. ದಾಖಲೆ ಇಲ್ಲದ 75 ಲಕ್ಷ ರೂಪಾಯಿ ಪತ್ತೆಯಾಗಿದೆ.

ಹಣ ಹಾಗೂ ಕಾರಿನಲ್ಲಿದ್ದವರನ್ನು ವಶಕ್ಕೆ ಪಡೆಯಲಾಗಿದ್ದು, ಐಟಿ ಇಲಾಖೆಗೆ ಮಾಹಿತಿ ನೀಡಲಾಗಿದೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular