ಹಾವೇರಿ: ನಿಂತಿದ್ದ ಟ್ರಾಕ್ಟರ್ ಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಾನದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕಾಕೋಳ ಬಳಿ ನಡೆದಿದೆ.
ಅಪಘಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಮೃತರನ್ನು ದಾವಣಗೆರೆ ಜಿಲ್ಲೆ ನಿಂಗಮ್ಮ ಜಿಗಳೇರ್ (70), ಚಮನಸಾಬ್ ಕೆರಿಮತ್ತಿಹಳ್ಳಿ (65), ಮಾಬುಸಾಬ್ ದೊಡ್ಡಗುಬ್ಬಿ (65), ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ರಾಣೆಬೆನ್ನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮದುವೆ ಕಾರ್ಯಕ್ರಮಕ್ಕೆ ಹೋಗಿ ವಾಪಾಸ್ ಆಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ರಾಣೆಬೆನ್ನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.