HomeKarnatakaBREAKING: ಭೀಕರ ಅಪಘಾತ: ನವದಂಪತಿ ಸ್ಥಳದಲ್ಲೇ ಸಾವು

BREAKING: ಭೀಕರ ಅಪಘಾತ: ನವದಂಪತಿ ಸ್ಥಳದಲ್ಲೇ ಸಾವು

ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ನವದಂಪತಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ಕಾರ್ತಿಕ್ ಹೂಗಾರ (34) ಹಾಗೂ ಪತ್ನಿ ಐಶ್ವರ್ಯ (30) ಎಂದು ಗುರುತಿಸಲಾಗಿದೆ. ಮೃತರು ಹಾವೇರಿ ನಗರದ ನಿವಾಸಿಗಳು. ನವಜೋಡಿ ವಿವಾಹವಾಗಿ ಕೇವಲ 15 ದಿನಗಳಾಗಿತ್ತು. ದೇವರ ದರ್ಶನಕ್ಕೆ ಹೋಗಿ ವಾಪಾಸ್ ಆಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ತಡಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular