HomeKarnatakaBREAKING NEWS: ಚರಂಡಿ ನೀರಲ್ಲಿ ಕೊಚ್ಚಿ ಹೋದ ಬಾಲಕ: ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗವೇ ದುರಂತ

BREAKING NEWS: ಚರಂಡಿ ನೀರಲ್ಲಿ ಕೊಚ್ಚಿ ಹೋದ ಬಾಲಕ: ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗವೇ ದುರಂತ

ಹಾವೇರಿ: ಹಾವೇರಿಯಾದ್ಯಂತ ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ರಸ್ತೆ ಕಾಣದೇ 12 ವರ್ಷದ ಬಾಲಕನೊಬ್ಬ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.

ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗವೇ ಈ ದುರಂತ ಸಂಭವಿಸಿದೆ. 12 ವರ್ಷದ ನಿವೇದನ್ ಬಸವರಾಜ್ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿರುವ ಬಾಲಕ.

ಘಟಾನಾ ಸ್ಥಳಕ್ಕೆ ನಗರಸಭೆ ಅಧಿಕಾರಿಗಳು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಚರಂಡಿ ನೀರಲ್ಲಿ ಕೊಚ್ಚಿ ಹೋದ ಬಾಲಕನಿಗಾಗಿ ಶೋಧ ನಡೆಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular