HomeKarnatakaBREAKING NEWS: ನಿಯಂತ್ರಣ ತಪ್ಪಿ ಕಾರ್ ಪಲ್ಟಿ: ಭೀಕರ ಅಪಘಾತದಲ್ಲಿ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದ...

BREAKING NEWS: ನಿಯಂತ್ರಣ ತಪ್ಪಿ ಕಾರ್ ಪಲ್ಟಿ: ಭೀಕರ ಅಪಘಾತದಲ್ಲಿ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದ ನಾಲ್ವರು ಸಾವು

ಹಾವೇರಿ: ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ಸಮೀಪ ನಡೆದಿದೆ.

ಕಾರ್ ಪಲ್ಟಿಯಾಗಿ ಸರ್ವಿಸ್ ರಸ್ತೆಗೆ ಬಿದ್ದು ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದ ನಾಲ್ವರು ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆ ರಾಣೇಬೆನ್ನೂರು ಸಮೀಪ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, 6 ಜನ ಗಾಯಗೊಂಡಿದ್ದಾರೆ. ಸುರೇಶ್(45), ಐಶ್ವರ್ಯಾ(22) ಪ್ರಮೀಳಾ(28), ಚೇತನ(7) ಮೃತಪಟ್ಟವರು ಎಂದು ಹೇಳಲಾಗಿದೆ. ಮೃತರು ಹಾವೇರಿ ಅಶ್ವಿನಿ ನಗರದ ನಿವಾಸಿಗಳಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular