HomeLatest Newsಹಾವೇರಿಯಲ್ಲಿ ನಡೆದಿದ್ದು ಸರ್ಕಾರ ಶೂನ್ಯ ಸಾಧನೆಯ ಸಮಾವೇಶ

ಹಾವೇರಿಯಲ್ಲಿ ನಡೆದಿದ್ದು ಸರ್ಕಾರ ಶೂನ್ಯ ಸಾಧನೆಯ ಸಮಾವೇಶ

ಕರ್ನಾಟಕ ರಾಜ್ಯ ಸರ್ಕಾರ ಸಹಸ್ರ ದಿನಗಳು ಪೂರೈಸಿದ ಪ್ರಯುಕ್ತ ಹಾವೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹಲವು ಸಚಿವರು ಪಾಲ್ಗೊಂಡಿದ್ದರು.

ಆದರೆ ಪ್ರತಿಪಕ್ಷ ಬಿಜೆಪಿ ಯಾವ ಸಾಧನೆಗಾಗಿ ಸಮಾವೇಶ ಮಾಡಿದ್ದಾರೆ? ಎಂದು ಪ್ರಶ್ನೆ ಮಾಡಿದೆ. ಹಾವೇರಿ-ಗದಗ ಸಂಸದ ಬಸವರಾಜ ಬೊಮ್ಮಾಯಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ‘ಇವತ್ತು ಹಾವೇರಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಶೂನ್ಯ ಸಾಧನೆಯ ಸಮಾವೇಶ ಮಾಡಿದ್ದಾರೆ’ ಎಂದು ವ್ಯಂಗ್ಯವಾಡಿದರು.

‘ಈ ಸಮಾವೇಶಕ್ಕೆ ಸ್ವಯಂ ಪ್ರೇರಿತವಾಗಿ ಜನರು ಬರಲು ಸಾಧ್ಯವಿಲ್ಲ ಎಂದು ಅರಿತು ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಜಮೀನನಲ್ಲಿ ಇರುವ ಜನರಿಗೆ ಹಕ್ಕು ಪತ್ರ ನೀಡುವ ಕಾರ್ಯಕ್ರಮ ಮಾಡಿದ್ದಾರೆ’ ಎಂದು ದೂರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‘ನಮ್ಮ ಬಿಜೆಪಿ ಸರ್ಕಾರ ಇದ್ದಾಗ ನಾವು ಅಕ್ರಮ ಇದ್ದದ್ದನ್ನು ಸಕ್ರಮ ಮಾಡಿದ್ದೇವೆ ಮತ್ತು ಅದರ ಮುಖಾಂತರ ಸಾಲ ಸಿಗುವ ವ್ಯವಸ್ಥೆ ಮಾಡಿದ್ದೇವೆ. ಈಗ ಜನರ ಆಸ್ತಿಯನ್ನು ಅವರೇ ಕೊಂಡುಕೊಳ್ಳುವ ವ್ಯವಸ್ಥೆ ಮಾಡಿ ಸರ್ಕಾರ ಬರಿದಾದ ಖಜಾನೆ ತಂಬಲು ಸಬ್ ರೆಜಿಸ್ಟಾರ್ ಕಚೇರಿಯಲ್ಲಿ ನೋಂದಣಾ ಶುಲ್ಕವನ್ನು ಬಡವರ ತಲೆ ಮೇಲೆ ಹೇರಿದ್ದಾರೆ’ ಎಂದು ಬಸವರಾಜ ಬೊಮ್ಮಾಯಿ ದೂರಿದರು.

‘ಒಬ್ಬ ಬಡವ ಮೂರು ನಾಲ್ಕು ಲಕ್ಷ ಕಟ್ಟುವ ಪರಿಸ್ಥಿತಿ ಬಂದಿದೆ. ಅಷ್ಟೇ ಅಲ್ಲಾ ಈ ವ್ಯವಸ್ಥೆ ಮಾಡಲು ಕಂದಾಯ ಇಲಾಖೆಯಲ್ಲಿ ಬಹಳ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದೆ. ಇದು ಭ್ರಷ್ಟಾಚಾರದ ಸಾಧನೆಯ ಸಮಾವೇಶ ಮತ್ತು ಬಡವರ ತಲೆ ಮೇಲೆ ಆರ್ಥಿಕ ಭಾರದ ಹೊಡೆತವನ್ನು ಈ ಸರ್ಕಾರ ಕೊಡುತ್ತಿದೆ’ ಎಂದು ಆರೋಪಿಸಿದರು.

‘ಇದೇ ಜಾಗದಲ್ಲಿ ಪ್ರಧಾನಮಂತ್ರಿ ಆವಾಸ ಯೋಜನೆ ಅಡಿಯಲ್ಲಿ ಯಾವುದೇ ಮನೆಗಳನ್ನು ಕಟ್ಟುವ ಪ್ರಕ್ರಿಯೆ ರಾಜ್ಯದಲ್ಲಿ ನಡೆಯುತ್ತಿಲ್ಲ. ಒಂದು ಸಾವಿರ ದಿವಸದ ವ್ಯರ್ಥ ಆಡಳಿತದ ಶೂನ್ಯ ಸಾಧನೆಯ ಈ ಸಮಾವೇಶವನ್ನು ಬಡವರು ಹಿಡಿ ಶಾಪ ಹಾಕುತ್ತಿರುವುದು ಸತ್ಯ‌. ಇದು ಅತ್ಯಂತ ಖಂಡನೀಯ’ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್ ಹೇಳಿಕೆ: ಸಮಾವೇಶದ ಕುರಿತು ಪೋಸ್ಟ್ ಹಾಕಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜನಸೇವೆಯಲ್ಲಿ ಸಾರ್ಥಕ 1000 ದಿನಗಳನ್ನು ಪೂರೈಸಿರುವ ಹಿನ್ನೆಲೆ ಹಾವೇರಿಯಲ್ಲಿ ಹಮ್ಮಿಕೊಂಡಿದ್ದ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದೆ ಎಂದು ತಿಳಿಸಿದ್ದಾರೆ.

ಕಂದಾಯ ಸಚಿವರಾದ ಶ್ರೀ ಕೃಷ್ಣಭೈರೇಗೌಡರಿಗೆ ರಾಜ್ಯದ ಎಲ್ಲಾ ಭೂಮಾಲೀಕರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸರ್ಕಾರದ 1000 ದಿನಗಳ ಸಾಧನೆ, ರಾಜ್ಯದಲ್ಲಿ ದೊಡ್ಡ ಬದಲಾವಣೆಯನ್ನು ತಂದಿದೆ. ನಿಮ್ಮ ಋಣ ತೀರಿಸಲು ಇಲ್ಲಿಗೆ ಬಂದಿದ್ದೇವೆ. ನಿಮ್ಮ ಕೆಲಸ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ. ಹೀಗಾಗಿ ನುಡಿದಂತೆ ನಡೆದು ನಿಮ್ಮ ಆಶೀರ್ವಾದ ಪಡೆಯಲಿಕ್ಕೆ ಇಲ್ಲಿಗೆ ನಾವು ಬಂದಿದ್ದೇವೆ ಎಂದು ತಿಳಿಸಿದ್ದಾರೆ.

ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಮಾತ್ರ ಚೆಂದ ಅಂತ ಹೇಳಿದ್ದೆ. ಈ ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿ ಇದ್ದಿದ್ದಕ್ಕೆ 5 ಗ್ಯಾರಂಟಿಗಳ ಜೊತೆಗೆ ಇದೀಗ 6ನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿಯನ್ನು ನೀಡುತ್ತಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular