HomeCrimeಕ್ಷುಲ್ಲಕ ಕಾರಣಕ್ಕೆ ಕಂಬಕ್ಕೆ ಕಟ್ಟಿ ದಲಿತ ವ್ಯಕ್ತಿ ಮೇಲೆ ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ಕಂಬಕ್ಕೆ ಕಟ್ಟಿ ದಲಿತ ವ್ಯಕ್ತಿ ಮೇಲೆ ಹಲ್ಲೆ

Etv Bharat

ಕ್ಷುಲ್ಲಕ ಕಾರಣಕ್ಕೆ ದಲಿತ ವ್ಯಕ್ತಿಯೊಬ್ಬರನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಮೂಕಬಸರೀ ಕಟ್ಟಿ ಗ್ರಾಮದಲ್ಲಿ ನಡೆದಿದೆ.

ರಮೇಶ ದುರ್ಗಪ್ಪ ಹರಿಜನ ದೌರ್ಜನ್ಯಕ್ಕೊಳಗಾದವರಾಗಿದ್ದು, ಗ್ರಾಮದ ಕೆಲವರು ಬುಧವಾರ ಸಂಜೆ ಈ ಕೃತ್ಯ ನಡೆಸಿದ್ದಾರೆ. ಹಲ್ಲೆಗೊಳಗಾದ ರಮೇಶ ದುರ್ಗಪ್ಪ ಅವರಿಗೆ ಬಂಕಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಮೇಶ ಅವರ ಮನೆ ಎದುರಿಗಿನ ಮರದ ಕೊಂಬೆಗಳು ವಿದ್ಯುತ್ ಕಂಬಕ್ಕೆ ತಾಗುತ್ತಿದ್ದು, ಹೀಗಾಗಿ ಕೆಪಿಟಿಸಿಎಲ್ ಸಿಬ್ಬಂದಿ ಅವುಗಳನ್ನು ಕತ್ತರಿಸಿದ್ದರು. ಈ ಸಂದರ್ಭದಲ್ಲಿ ಮರದ ಮೇಲೆ ಹಾದುಹೋಗಿದ್ದ ಡಿಶ್ ಟಿವಿ ವೈರ್ ಸಹ ಆಕಸ್ಮಿಕವಾಗಿ ಕತ್ತರಿಸಿ ಹೋಗಿತ್ತು. ಇದನ್ನು ರಮೇಶ ಅವರೇ ಮಾಡಿದ್ದಾರೆ ಎಂದು ಭಾವಿಸಿದ ಕೆಲವರು ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಐವರನ್ನು ವಶಕ್ಕೆ ಪಡೆದಿರುವ ಬಂಕಾಪುರ ಠಾಣೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಅಲ್ಲದೆ ಹಲ್ಲೆಗೊಳಗಾದ ರಮೇಶ ಅವರ ಮನೆಗೆ ಭದ್ರತೆ ಕಲ್ಪಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular