HomeLatest Newsಹಾವೇರಿ: 4 ರೈಲು ಯೋಜನೆಗಾಗಿ ಕೇಂದ್ರ ಸಚಿವರಿಗೆ ಮನವಿ

ಹಾವೇರಿ: 4 ರೈಲು ಯೋಜನೆಗಾಗಿ ಕೇಂದ್ರ ಸಚಿವರಿಗೆ ಮನವಿ

ಹಾವೇರಿ ಜಿಲ್ಲೆಯ ವಿವಿಧ ರೈಲು ಯೋಜನೆಗಳ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಮನವಿ ಸಲ್ಲಿಕೆ ಮಾಡಲಾಗಿದೆ. ಈ ಕುರಿತು ಹಾವೇರಿ-ಗದಗ ಸಂಸದ ಬಸವರಾಜ ಬೊಮ್ಮಾಯಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.

ಇಂದು ನವದೆಹಲಿಯಲ್ಲಿ ಕೇಂದ್ರ ರೇಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಈ ಕೆಳಕಂಡ ಬೇಡಿಕೆಯೊಳಗೊಂಡ ಮನವಿಯನ್ನು ಸಲ್ಲಿಸಿದೆನು ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಯಾವ-ಯಾವ ಯೋಜನೆಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
  • ಶಿವಮೊಗ್ಗ-ರಾಣೆಬೆನ್ನೂರು ರೈಲು ಮಾರ್ಗ: (ಭೂಸ್ವಾಧೀನ ಸಮಸ್ಯೆಗಳ ಕಾರಣದಿಂದಾಗಿ ದೀರ್ಘಕಾಲದಿಂದ ಬಾಕಿಯಿರುವ ಈ ಯೋಜನೆಯ ಪೂರ್ಣಗೊಳಿಸುವಿಕೆ ವಿಳಂಬವಾಗುತ್ತಿದೆ. ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವ ಅಗತ್ಯವಿದೆ.)
  • ಯಲವಿಗಿ–ಗದಗ ಹೊಸ ರೈಲು ಮಾರ್ಗ: ಈ ಹೊಸ ಮಾರ್ಗದ ವಿವರವಾದ ಯೋಜನಾ ವರದಿ (DPR) ಯನ್ನು ತ್ವರಿತಗೊಳಿಸಿ, ಯೋಜನೆಗೆ ಅನುಮೋದನೆ ನೀಡುವಂತೆ ವಿನಂತಿಸಲಾಗಿದೆ.
  • ಗದಗ–ಕುಷ್ಟಗಿ ಹೊಸ ರೈಲು ಮಾರ್ಗ: ನರೇಗಲ್ ಹಾಗೂ ಗಜೇಂದ್ರಗಡ ಮಾರ್ಗವಾಗಿ ಹೊಸ ರೈಲು ಮಾರ್ಗಕ್ಕೆ ಸಮೀಕ್ಷೆ ನಡೆಸುವಂತೆ ಬೇಡಿಕೆ.

ಈ ಸಂದರ್ಭದಲ್ಲಿ ನಮ್ಮ ಮನವಿಯನ್ನು ಆಲಿಸಿದ ಸಚಿವರು ಶ್ರೀಘ್ರವಾಗಿ ಪರಿಶೀಲಿಸಿ, ಕ್ರಮಕೈಗೊಳ್ಳುವುದಾಗಿ ತಿಳಿಸಿದರು ಎಂದು ಬವಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular