ಸುಳ್ಳು ಜಾತಿ ಪ್ರಮಾಣ ಪತ್ರ, ನಕಲಿ ದಾಖಲೆ ಸೃಷ್ಟಿಸಿ ಗ್ರಾಪಂ ಅಧ್ಯಕ್ಷೆಯಾಗಿದ್ದ ಮಹಿಳೆಗೆ 7 ವರ್ಷ ಜೈಲು ಶಿಕ್ಷೆ

ಹಾವೇರಿ: ಸುಳ್ಳು ಜಾತಿ ಪ್ರಮಾಣ ಪತ್ರ ಸೃಷ್ಟಿಸಿದ ಆರೋಪಿಗೆ 7 ವರ್ಷ ಕಾರಾಗೃಹ ಶಿಕ್ಷೆ, 19,000 ರೂ. ದಂಡ ವಿಧಿಸಿ ಹಾವೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶ ಜಿ.ಎಲ್. ಲಕ್ಷ್ಮೀನಾರಾಯಣ ತೀರ್ಪು ನೀಡಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕು ವನಹಳ್ಳಿಯ ಲಕ್ಷ್ಮಿ ಕಬ್ಬೇರ ಅವರು ಪ್ರವರ್ಗ -1ರ ಹಿಂದೂ ಗಂಗಾಮತಕ್ಕೆ ಸೇರಿದ್ದರೂ, ಸುಳ್ಳು ಪ್ರಮಾಣ ಪತ್ರ ಮತ್ತು ಸುಳ್ಳು ಆಫಿಡವಿಟ್ ಘೋಷಣಾ ಪತ್ರ ಹಾಗೂ ಇತರೆ ದಾಖಲಾತಿಗಳನ್ನು ಸೃಷ್ಟಿಸಿದ್ದಾರೆ.

ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದುಕೊಳ್ಳಲು ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ 2015ರ ಜೂನ್ 4ರಂದು ಶಿಗ್ಗಾವಿ ತಹಶೀಲ್ದಾರ್ ಕಚೇರಿಗೆ ಸಲ್ಲಿಸಿ ಹಿಂದೂ ಗಂಟಿಚೋರ್ಸ್ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ. ಈ ದಾಖಲೆ ನೀಡಿ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದ್ದ ಸ್ಥಾನಕ್ಕೆ ಸ್ಪರ್ಧಿಸಿ ಆಯ್ಕೆಯಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿಯೂ ಆಯ್ಕೆಯಾಗಿದ್ದರು.

ನೈಜ ಪರಿಶಿಷ್ಟ ಜಾತಿಯ ಅಭ್ಯರ್ಥಿಗೆ ವಂಚಿಸಿದ ಮತ್ತು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರಕ್ಕೆ ವಂಚನೆ ಮಾಡಿದ ಬಗ್ಗೆ ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು. ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಎಸ್ಸಿ/ ಎಸ್ಟಿ ತಿದ್ದುಪಡಿ ಕಾಯ್ದೆ 2015ರ ಅಡಿಯಲ್ಲಿ ಆಪಾದನೆ ರುಜುವಾತಾಗಿದ್ದರಿಂದ 7 ವರ್ಷ ಕಾರಾಗೃಹ ಶಿಕ್ಷೆ ಮತ್ತು 19,000 ರೂ. ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read