HomeLatest NewsBREAKING NEWS: ಸಾಂಬಾರು ಮೈಮೇಲೆ ಬಿದ್ದು ಗಾಯಗೊಂಡಿದ್ದ ಬಾಲಕಿ ಸಾವು!

BREAKING NEWS: ಸಾಂಬಾರು ಮೈಮೇಲೆ ಬಿದ್ದು ಗಾಯಗೊಂಡಿದ್ದ ಬಾಲಕಿ ಸಾವು!

ಹಾವೇರಿ: ಸಾಂಬಾರು ಮೈಮೇಲೆ ಬಿದ್ದು ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.

ರುಕ್ಸಾನಾಬಾನು ಶೇಖ್ ಸನದಿ ಮೃತ ಬಾಲಕಿ. ಪೋಷಕರ ಜೊತೆ ಸಂಬಂಧಿಕರ ವಿವಾಹಕ್ಕೆಂದು ಹೋಗಿದ್ದ ಬಾಲಕಿ ಮೈಮೇಲೆ ಬಿಸಿ ಸಾಂಬಾರು ಬಿದ್ದಿತ್ತು. ಗಂಭೀರವಾಗಿ ಗಯಗೊಂಡಿದ್ದ ಬಾಲಕಿಯನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ಹಿಂದಷ್ಟೇ ಬಾಲಕಿ ಆಸ್ಪತ್ರೆಯಿಂದ ದಿಸ್ಚಾರ್ಜ್ ಆಗಿದ್ದಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನೆಗೆ ಬಂದಿದ್ದ ಬಾಲಕಿ ಮೈಮೇಲೆ ಇಂದು ಮತ್ತೆ ಗುಳ್ಳೆಗಳು ಕಾಣಿಸಿಕೊಂಡಿದ್ದವು. ಬಾಲಕಿಯನ್ನು ಹುಳ್ಳಿ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾಳೆ. ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

For Latest News Updates, Join Our Whatsapp Community🚩
RELATED ARTICLES

Most Popular