BREAKING NEWS: ಹಾನಗಲ್ ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ; ಮತ್ತೆ ಇಬ್ಬರು ಆರೋಪಿಗಳು ಅರೆಸ್ಟ್

ಹಾವೇರಿ: ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಮಹಿಳೆಯ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾನಗಲ್ ಪೊಲೀಸರು ಇದೀಗ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದು, ಈವರೆಗೆ ಒಟ್ಟು 6 ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಬಲೆ ಬೀಸಲಾಗಿದೆ.

ನೈತಿಕ ಪೊಲೀಸ್ ಗಿರಿ ನಡೆಸಿದ ಬಳಿಕ ಯುವಕರ ಗುಂಪು ಮಹಿಳೆಯನ್ನು ಎಳೆದೊಯ್ದು ಗ್ಯಾಂಗ್ ರೇಪ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಸಂತ್ರಸ್ಥ ಮಹಿಳೆ ದೂರು ದಾಖಲಿಸಿದ್ದರು.

ಇನ್ನು ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆ ಮನೆಗೆ ಇಂದು ಬಿಜೆಪಿ ಮಹಿಳಾ ನಿಯೋಗ ಭೇಟಿ ನೀಡುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read