ಹಾವೇರಿಯಲ್ಲಿ ಅತಿ ಹೆಚ್ಚು ಮದ್ರಾಸ್ ಐ ಪ್ರಕರಣ ಪತ್ತೆ; ಸೋಂಕಿತರ ಸಂಖ್ಯೆಯಲ್ಲಿ ಮೂರನೇ ಸ್ಥಾನದಲ್ಲಿ ಶಿವಮೊಗ್ಗ; ಜನರನ್ನು ಕಂಗೆಡಿಸುತ್ತಿದೆ ಕಣ್ಣುಬೇನೆ

ಹಾವೇರಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮದ್ರಾಸ್ ಐ ಪ್ರಕರಣ ಹೆಚ್ಚುತ್ತಿದೆ. ಅದರಲ್ಲಿಯೂ ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಕೋವಿಡ್ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆಯಲ್ಲಿಯೂ ಅಪಖ್ಯಾತಿಗಳಿಸಿದ್ದ ಹಾವೇರಿ ಬಳಿಕ ಲಿಂಪಿ ಸ್ಕಿನ್ ಕಾಯಿಲೆಯಿಂದ ದನ ಕರುಗಳ ಸಾವಿನ ಸಂಖ್ಯೆಯಲ್ಲಿಯೂ ಅಗ್ರಸ್ಥಾನ ಪಡೆದಿತ್ತು. ರೈತರ ಆತ್ಮಹತ್ಯೆ ಪ್ರಕರಣದಲ್ಲೂ ನಂಬರ್ ಒನ್ ಸ್ಥಾನದಲ್ಲಿತ್ತು. ಇದೀಗ ಮದ್ರಾಸ್ ಐ ಪ್ರಕರಣದಲ್ಲಿ ರಾಜ್ಯದಲ್ಲಿ ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ 64,506 ಮದ್ರಾಸ್ ಐ ಕೇಸ್ ಪತ್ತೆಯಾಗಿದ್ದು, ಅವುಗಳ ಪೈಕಿ 9,901 ಪ್ರಕರಣಗಳು ಹಾವೇರಿ ಜಿಲ್ಲೆಯೊಂದರಲ್ಲೇ ಪತ್ತೆಯಾಗಿವೆ. ಬೀದರ್ ಜಿಲ್ಲೆ ಎರಡನೇ ಸ್ಥಾನದಲ್ಲಿದ್ದು, ಶಿವಮೊಗ್ಗ ಜಿಲ್ಲೆ ಮೂರನೇ ಸ್ಥಾನದಲ್ಲಿದೆ. ಮದ್ರಾಸ್ ಐ ಪ್ರಕರಣದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿವೆ. ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಜನರು ಪರದಾಡುವಂತಾಗಿದೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read