HomeKarnatakaBIG NEWS: ಕೊಲೆ ಮಾಡಿ ಜೈಲು ಸೇರಿದ್ದ ವಿಚಾರಣಾಧೀನ ಖೈದಿ ಆತ್ಮಹತ್ಯೆ

BIG NEWS: ಕೊಲೆ ಮಾಡಿ ಜೈಲು ಸೇರಿದ್ದ ವಿಚಾರಣಾಧೀನ ಖೈದಿ ಆತ್ಮಹತ್ಯೆ

ಹಾವೇರಿ: ಡಬಲ್ ಮರ್ಡರ್ ಮಾಡಿ ಜೈಲು ಸೇರಿದ್ದ ವಿಚಾರಣಾಧೀನ ಖೈದಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

ಹಾವೇರಿಯ ಕೆರೆಮತ್ತಿಹಳ್ಳಿ ಬಳಿ ಇರುವ ಜೈಲುಕಾರಗೃಹದಲ್ಲಿ ಕೈದಿ ನೇಣಿಗೆ ಶರಣಾಗಿದ್ದಾನೆ. ಕೋಟೆಪ್ಪ ಅಂಬಿಗೇರ್ (42) ಆತ್ಮಹತ್ಯೆಗೆ ಶರಣಾಗಿರುವ ಖೈದಿ. ಮೃತ ಕೋಟೆಪ್ಪ ಅಂಬಿಗೇರ್, 6 ವರ್ಷಗಳ ಹಿಂದೆ ಡಬಲ್ ಮರ್ಡರ್ ಮಾಡಿ ಜೈಲು ಸೇರಿದ್ದ. ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಆದರೆ ಆತನಿಗೆ ಜಾಮೀನು ಸಿಕ್ಕಿರಲಿಲ್ಲ.

ಇದೀಗ ಜೈಲಿನಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular