ಸ್ಲೀಪರ್ ಕೋಚ್ ಬಸ್ ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು; ಯುವತಿ ದುರ್ಮರಣ; ಯುವಕ ಪಾರು

ಹಾವೇರಿ: ಪ್ರೇಮಿಗಳಿಬ್ಬರೂ ಸ್ಲೀಪರ್ ಕೋಚ್ ಬಸ್ ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಚಳಗೇರಿ ಟೋಲ್ ಬಳಿಯ ಗ್ರೀನ್ ಪ್ಯಾಲೇಸ್ ಹೋಟೆಲ್ ಬಳಿ ನಡೆದಿದೆ.

ವಿಷ ಸೇವಿಸಿದ್ದ ಯುವತಿ ಬಸ್ ನಲ್ಲೇ ಉಸಿರು ಚೆಲ್ಲಿದ್ದು, ತೀವ್ರ ಅಸ್ವಸ್ಥನಾಗಿದ್ದ ಯುವಕನನ್ನು ಪ್ರಯಾಣಿಕರೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೇಮಾ ರಾಮಕೃಷ್ಣ (20) ಮೃತ ಯುವತಿ. ಯುವಕ ಅಖಿಲ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಯುವತಿ ಬೆಂಗಳೂರು ಮೂಲದವಳಾಗಿದ್ದು, ಅಂತಿಮ ವರ್ಷದ ಬಿಎ ಓದುತ್ತಿದ್ದಳು. ಯುವಕ ಅಖಿಲ್ ಬಾಗಲಕೋಟೆ ಮೂಲದವನಾಗಿದ್ದು, ಹೇಮಾ ಹಾಗೂ ಅಖಿಲ್ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿಗೆ ಮನೆಯವರ ವಿರೋಧವಿತ್ತು ಎನ್ನಲಾಗಿದೆ. ಇದರಿಂದ ಬೇಸತ್ತ ಪ್ರೇಮಿಗಳು ಬಸ್ ನಲ್ಲೇ ವಿಷ ಸೇವಿಸಿದ್ದಾರೆ. ಐದು ದಿನಗಳ ಹಿಂದೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read