HomeKarnatakaBIG NEWS: ಮಹಿಳೆಯರ ಹೆಸರಲ್ಲಿ ಕೋಟಿ ಕೋಟಿ ವಂಚನೆ; ನಕಲಿ ದಾಖಲೆ ಸೃಷ್ಟಿಸಿ ಫೈನಾನ್ಸ್ ಕಂಪನಿ...

BIG NEWS: ಮಹಿಳೆಯರ ಹೆಸರಲ್ಲಿ ಕೋಟಿ ಕೋಟಿ ವಂಚನೆ; ನಕಲಿ ದಾಖಲೆ ಸೃಷ್ಟಿಸಿ ಫೈನಾನ್ಸ್ ಕಂಪನಿ ಮ್ಯಾನೇಜರ್, ಕ್ಯಾಶಿಯರ್ ಗಳಿಂದಲೇ ಮೋಸ

ಹಾವೇರಿ: ಮಹಿಳೆಯರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಮೈಕ್ರೋಫೈನಾನ್ಸ್ ಕಂಪನಿ ಮ್ಯಾನೇಜರ್ ಹಾಗೂ ಕ್ಯಾಶಿಯರ್ ಕೋಟಿ ಕೋಟಿ ವಂಚನೆ ಮಾಡಿರುವ ಪ್ರಕರಣ ಹಾವೇರಿ ಜಿಲ್ಲೆಯ ಹಿರೇಕೆರೂರಿನಲ್ಲಿ ನಡೆದಿದೆ.

ಮೈಕ್ರೋಫೈನಾನ್ಸ್ ಮ್ಯಾನೇಜರ್ ಬಸವರಾಜಯ್ಯ ಹಾಗೂ ಕ್ಯಾಶಿಯರ್ ಶಿವಾನಂದಪ್ಪ ಗ್ರಾಮೀಣ ಭಾಗದ ಮಹಿಳೆಯರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸಾಲ ನೀಡಲಾಗಿದೆ ಎಂದು ತೋರಿಸಿ ಬರೋಬ್ಬರಿ 4,16,14000ರೂ ಹಣವನ್ನು ತಾವೇ ದುರುಪಯೋಗ ಪಡಿಸಿಕೊಂಡಿದ್ದಾರೆ. ಮೈಕ್ರೋಫೈನಾನ್ಸ್ ಶಾಖೆಯಲ್ಲಿ ಬೇರೊಂದು ಲೆಕ್ಕ ತೋರಿಸಿದ್ದು, ಪರಿಶೀಲನೆ ವೇಳೆ ಮ್ಯಾನೇಜರ್ ಹಾಗೂ ಕ್ಯಾಶಿಯರ್ ನಡೆಸಿರುವ ಕಳ್ಳಾಟ ಬಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫೈನಾನ್ಸ್ ಕಂಪನಿಯ ವ್ಯವಸ್ಥಾಪಕ ತಿಮ್ಮರಾಜು ಹಿರೇಕೇರೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕ್ಯಾಶಿಯರ್ ಶಿವಾನಂದಪ್ಪನನ್ನು ಬಂಧಿಸಲಾಗಿದೆ. ಮ್ಯಾನೇಜರ್ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular