BIG NEWS: ನೈತಿಕ ಪೊಲೀಸ್ ಗಿರಿ ಆರೋಪಿಗಳದ್ದು ಎನ್ನಲಾದ ಮತ್ತೊಂದು ವಿಡಿಯೋ ವೈರಲ್; ಕಾರಿನಲ್ಲಿ ಯುವತಿ ಎಳೆದೊಯ್ದು ಲೈಂಗಿಕ ದೌರ್ಜನ್ಯ

ಹಾವೇರಿ: ನೈತಿಕ ಪೊಲೀಸ್ ಗಿರಿ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಿಂದ ಹಾವೇರಿ ಜಿಲ್ಲೆಯ ಹಾನಗಲ್ ಜನತೆ ಬೆಚ್ಚಿ ಬಿದ್ದಿದ್ದಾರೆ. ಅನ್ಯಕೋಮಿನ ಪುರುಷನೊಂದಿಗೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದಿದ್ದ ಮಹಿಳೆಯನ್ನು ಎಳೆದೊಯ್ದು ಮನಬಂದಂತೆ ಹಲ್ಲೆ ನಡೆಸಿದ್ದ ಪುಂಡರ ಗುಂಪು ಸಾಮೂಹಿಕ ಅತ್ಯಾಚಾರವೆಸಗಿದೆ ಎಂಬ ಆರೋಪ ಕೇಳಿಬಂದಿದೆ. ಈ ನಡುವೆ ನೈತಿಕ ಪೊಲೀಸ್ ಗಿರಿ ನಡೆಸಿದ್ದ ಈ ಪುಂಡರ ಗುಂಪಿನದ್ದು ಎನ್ನಲಾದ ಮತ್ತೊಂದು ಭಯಾನಕ ವಿಡಿಯೋ ವೈರಲ್ ಆಗಿದೆ.

ಯುವಕರ ಗುಂಪು ಮುಸ್ಲಿಂ ಯುವತಿಯೊಬ್ಬಳನ್ನು ಕಾರಿನಲ್ಲಿ ಎಳೆದೊಯ್ದು ಹಲ್ಲೆ ನಡೆಸಿ ಚಿತ್ರಹಿಂಸೆ ನೀಡಿದ್ದಾರೆ. ಅಲ್ಲದೇ ಲೈಂಗಿಕ ದೌರ್ಜನ್ಯ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೆಲ ಮುಸ್ಲಿಂ ಯುವಕರ ಗುಂಪು ಹಾನಗಲ್ ನಲ್ಲಿ ಮುಸ್ಲಿಂ ಮಹಿಳೆಯರು, ಯುವತಿಯರನ್ನು ಟಾರ್ಗೆಟ್ ಮಾಡಿ ಹಿಂದು ಯುವಕರ ಜೊತೆ ಕಾಣಿಸಿಕೊಂಡರೆ ಎಳೆದೊಯ್ದು ಹಿಂಸಿಸುತ್ತಿದ್ದಾರೆ ಎನ್ನಲಾಗಿದೆ.

ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಇಂತಹ ಘಟನೆಯಿಂದ ಹಾನಗಲ್ ಜನತೆ ಬೆಚ್ಚಿ ಬಿದ್ದಿದ್ದಾರೆ. ಕೆಲ ದಿನಗಳಿಂದ ಇಷ್ಟೆಲ್ಲ ಘಟನೆಗಳು, ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಮರುಕಳಿಸುತ್ತಿದ್ದರೂ ಪೊಲೀಸರು ಮಾತ್ರ ಕಣ್ಮುಚ್ಚಿ ಕುಳಿತಿರುವಿದು ಆತಂಕಕಾರಿ ಬೆಳವಣಿಗೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read